ಮಲ್ಪೆ: ಹೂಡೆಯ ರಸ್ತೆ ಬದಿಯಲ್ಲಿ ನವಜಾತ ಮಗು ಪತ್ತೆ
Monday, September 07, 2026
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದೆ.
ಇಂದು ಬೆಳಿಗ್ಗೆ ಸ್ಥಳೀಯರು ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಮಗು ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಮಗುವಿನಲ್ಲಿ ಹೃದಯ ಬಡಿತ ಇರುವುದು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾಹಿತಿ ತಿಳಿದು ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.