ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೂವರು ಆರೋಪಿಗಳ ಬಂಧನ
Tuesday, September 08, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
2026ರ ಫೆಬ್ರವರಿಯಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ಜವಾದ್, ಶಾಹಿದ್, ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಸೇರಿದಂತೆ ಇತರ ಮೂವರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಂತ್ರಸ್ತ ಬಾಲಕ ಸೆಪ್ಟೆಂಬರ್ 4ರಂದು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.
ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು ಆರು ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪೈಕಿ ಜವಾದ್, ಶಾಹಿದ್ ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಎಂಬ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.