-->
 ಪ್ರಧಾನಿ ಮೋದಿ ಸೇವಾ ಬದ್ಧತೆ ಮೈಗೂಡಿಸಿಕೊಳ್ಳೋಣ: ಕುತ್ಯಾರು ನವೀನ್ ಶೆಟ್ಟಿ

ಪ್ರಧಾನಿ ಮೋದಿ ಸೇವಾ ಬದ್ಧತೆ ಮೈಗೂಡಿಸಿಕೊಳ್ಳೋಣ: ಕುತ್ಯಾರು ನವೀನ್ ಶೆಟ್ಟಿ


ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಜನಸೇವೆಯ ಜೊತೆಗೆ ವಿಶ್ವಮಟ್ಟದಲ್ಲಿ ಭಾರತದ ಕೀರ್ತಿ, ಘನತೆ ಹಾಗೂ ಗೌರವವನ್ನು ಹೆಚ್ಚಿಸಿದ ಸೇವಾ ಬದ್ಧತೆಯನ್ನು ಕಾರ್ಯಕರ್ತರು ಮೈಗೂಡಿಸಿಕೊಳ್ಳಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.


ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಕೆಳ ಪರ್ಕಳದ ಶ್ರೀ ತುಳಜಾ ಭವಾನಿ ದೇವಿಕಟ್ಟೆ ಕೂಡುಕಟ್ಟಿನ ಸಮುದಾಯ ಭವನದಲ್ಲಿ ಆಯೋಜಿಸಿದ್ದ ‘ಸೇವಾ ಸೇತು–ಸರಕಾರ ನಿಮ್ಮ ಬಾಗಿಲಿಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳ ಮಾಹಿತಿ, ಆಯ್ದ ಐವರು ಫಲಾನುಭವಿಗಳ ಸನ್ಮಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮದ ವೀಕ್ಷಣೆ ನಡೆಯಿತು.


ಬಿಜೆಪಿ ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡದೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರೊರೆಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದ ಜನರು ಬೇಸತ್ತಿದ್ದಾರೆ ಎಂದು ಆರೋಪಿಸಿದ ಅವರು, ಪಕ್ಷದ ಕಾರ್ಯಕರ್ತರು ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರೊಂದಿಗೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಮಣಿಪಾಲ ವಹಿಸಿದ್ದರು. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಾದ ಸುಂದರಿ ಬಾಯಿ, ಭವ್ಯ ನಾಯ್ಕ್, ಅನಿತಾ ನಾಯ್ಕ್, ಸುನಂದ ನಾಯ್ಕ್ ಹಾಗೂ ಚಂದ್ರಶೇಖರ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹಾಗೂ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕ ದಿನಕರ ಶೆಟ್ಟಿ ಹೆರ್ಗ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್ ಹಾಗೂ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಸಹ ಸಂಚಾಲಕ ಉಮೇಶ್ ಎ. ನಾಯ್ಕ್ ಚೇರ್ಕಾಡಿ, ಕಾರ್ಯಕ್ರಮದ ಉಸ್ತುವಾರಿ ರಾಘವೇಂದ್ರ ಕುಂದರ್, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಮಾಜಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಮಾಜಿ ನಗರಸಭಾ ಸದಸ್ಯೆ ವಿಜಯಲಕ್ಷ್ಮಿ, ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಲತ, ಪ್ರಧಾನ ಕಾರ್ಯದರ್ಶಿ ಸುಗುಣಾ ನಾಯ್ಕ್, ಪರ್ಕಳ ವಾರ್ಡ್ ಅಧ್ಯಕ್ಷ ಹೇಮಂತ್ ಕುಮಾರ್, ತುಳಜಾ ಭವಾನಿ ದೇವಿ ಕಟ್ಟೆಯ ಗುರಿಕಾರ ನಾರಾಯಣ ನಾಯ್ಕ್ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಯ್ಕ್ ಸ್ವಾಗತಿಸಿದರು. ಉಮೇಶ್ ನಾಯ್ಕ್ ನೂಜಿನಬೈಲು ವಂದಿಸಿದರು. ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ತಂಡದ ಸದಸ್ಯ ಹಾಗೂ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article