-->
 ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಕೊಲೆ: ಪತ್ನಿ, ಪುತ್ರ ನಾಪತ್ತೆ

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಕೊಲೆ: ಪತ್ನಿ, ಪುತ್ರ ನಾಪತ್ತೆ


ಉಡುಪಿ ಮೂಲದ ವ್ಯಕ್ತಿಯೊಬ್ಬರು ಶಾರ್ಜಾದಲ್ಲಿ ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮೃತರನ್ನು ಉಡುಪಿ ಮೂಲದ ಪ್ರಕಾಶ್ ಕುಂದರ್ ಎಂದು ಗುರುತಿಸಲಾಗಿದೆ. ಶಾರ್ಜಾದಲ್ಲಿ ಪತ್ನಿ ಟೀನಾ ಹಾಗೂ 10ನೇ ತರಗತಿಯಲ್ಲಿ ಓದುತ್ತಿರುವ ಪುತ್ರನೊಂದಿಗೆ ವಾಸಿಸುತ್ತಿದ್ದ ಪ್ರಕಾಶ್, ಶಾರ್ಜಾ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು.

ಜುಲೈ 20ರ ಸುಮಾರಿಗೆ ಸಹೋದರರನ್ನು ಸಂಪರ್ಕಿಸಲು ಯತ್ನಿಸಿದ್ದ ಪ್ರಕಾಶ್, ಎಂದಿನಂತೆ ಧ್ವನಿ ಸಂದೇಶದ ಬದಲಿಗೆ ಟೆಕ್ಸ್ಟ್ ಮೆಸೆಜ್ ಕಳುಹಿಸಿದ್ದರು. ಬಳಿಕ ಅವರ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಂಪನಿಯನ್ನು ಸಂಪರ್ಕಿಸಿದಾಗ, ಅವರು ಭಾರತಕ್ಕೆ ತೆರಳಿದ್ದಾರೆ ಎಂದು ತಿಳಿಸಲಾಗಿತ್ತು. ಆದರೆ ಪ್ರಕಾಶ್ ಊರಿಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಶಾರ್ಜಾ ಪೊಲೀಸರನ್ನು ಸಂಪರ್ಕಿಸಿದ್ದರು.

ತನಿಖೆ ನಡೆಸಿದ ಪೊಲೀಸರು ಪ್ರಕಾಶ್ ಅವರ ಮೃತದೇಹವನ್ನು ಅವರ ಕಾರಿನೊಳಗೆ ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ. ಚಾಕುವಿನಿಂದ ಇರಿದು ಕೊಲೆ ಮಾಡಿ, ಮೃತದೇಹವನ್ನು ತುಂಡುಗಳಾಗಿ ಮಾಡಲಾಗಿತ್ತು ಎಂದು ವರದಿಯಾಗಿದೆ.

ಪ್ರಕಾಶ್ ಅವರ ಪತ್ನಿ ಟೀನಾ ಹಾಗೂ ಪುತ್ರ ನಾಪತ್ತೆಯಾಗಿದ್ದು, ಅವರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಭಾರತಕ್ಕೆ ತೆರಳಿರುವ ಸಾಧ್ಯತೆಯ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.


Ads on article

Advertise in articles 1

advertising articles 2

Advertise under the article