-->
 ಅ.10: ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ

ಅ.10: ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ


ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಅಕ್ಟೋಬರ್ 10 ರಂದು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್ ಶಿಪ್ ನಡೆಯಲಿದೆ ಎಂದು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಯಶವಂತ ಸುವರ್ಣ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಸುಮಾರು 45 ತಂಡಗಳು ಪಂದ್ಯಾಕೂಟದಲ್ಲಿ ಭಾಗವಹಿಸಲಿದ್ದು, ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ನಾಡೋಜ ಡಾ. ಜಿ. ಶಂಕರ್ ರವರು ಪಂದ್ಯಕೂಟದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ ಪಾಲ್ ಸುವರ್ಣ, ಸುನೀಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್,  ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ರೋಷನ್ ಶೆಟ್ಟಿ, ಗಣ್ಯರಾದ ಆನಂದ ಸಿ. ಕುಂದರ್, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಪುರುಷೋತ್ತಮ ಶೆಟ್ಟಿ, 

ಆನಂದ ಪಿ. ಸುವರ್ಣ, ಸಾಧು ಸಾಲ್ಯಾನ್, ಹರಿಯಪ್ಪ ಕೋಟ್ಯಾನ್, ಹರಿಪ್ರಸಾದ್ ರೈ, ಉದಯ ಕುಮಾರ್ ಶೆಟ್ಟಿ ಕಿದಿಯೂರು, ಕೃಷ್ಣ ಮೂರ್ತಿ ಆಚಾರ್ಯ, ಜೇಸನ್ ಡಯಾಸ್, ಜಯಕರ ಶೆಟ್ಟಿ ಇಂದ್ರಾಳಿ, ಸಂಜೀವ ಶೆಟ್ಟಿ, ಅವಿನಾಶ್ ಶೆಟ್ಟಿ, ಇಬ್ರಾಹಿಂ ಮಲ್ಪೆ, ಶುಭಲಕ್ಷ್ಮೀ ಹರೀಶ್ ನಾಯಕ್, ಎಂ.ಕೆ. ಬಾಲರಾಜ್, ಲೋಹಿತ್ ಕುಮಾರ್ ಪಿತ್ರೋಡಿ, ಚಂದ್ರ ಶೇಖರ್ ಹೆಗ್ಡೆ ಬ್ರಹ್ಮಾವರ ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article