-->
 ಅ. 11: ರಂಗ ಕರ್ಮಿ ರವಿರಾಜ್ ಹೆಚ್.ಪಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ

ಅ. 11: ರಂಗ ಕರ್ಮಿ ರವಿರಾಜ್ ಹೆಚ್.ಪಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ


ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ, ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಸಮಾರಂಭವು  ಅಕ್ಟೋಬರ್ 11ರಂದು ಭಾನುವಾರ ಸಂಜೆ ಗಂಟೆ 4.30 ರಿಂದ ಕುಂಜಿಬೆಟ್ಟು ಯಕ್ಷಗಾನ ಕಲಾರಂಗ ಐ ವೈ ಸಿ ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಹೇಳಿದರು.

ಅವರು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿ ಸಂಗೊಳ್ಳಿ ರಾಯಣ್ಣ ಪುರಸ್ಕಾರವನ್ನು ಖ್ಯಾತ ಸಂಘಟಕ, ರಂಗ ಕರ್ಮಿ , ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್.ಪಿ ಯವರಿಗೆ ನೀಡಲಾಗುವುದು. ಸಂಜೆ 4.30 ರಿಂದ 5.00 ವರೆಗೆ ಖ್ಯಾತ ಗಾಯಕರಾದ ರಾಜೇಶ್ ಶಾನ್ ಭೋಗ್ ಇವರಿಂದ ಸುಮಧುರ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.

ಬಳಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ವಹಿಸಿಕೊಳ್ಳಲಿದ್ದಾರೆ. ಅಪರ ಜಿಲ್ಲಾಧಿಕಾರಿ ಅಭೀದ್ ಗದ್ಯಾಳ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ  ಕರ್ನಾಟಕ ಇದರ ಸಂಸ್ಥಾಪಕ ಸುರೇಶ್ ಗೋಕಾಕ್  ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಯಣ್ಣ ಮೂರ್ತಿಗೆ ಕ್ಷೀರಾಭಿಷೇಕವನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್  ಹಾಗು ರಾಯಣ್ಣ ಭಾವಚಿತ್ರಕ್ಕೆ ಉಡುಪಿ ಗಾಂಧಿ ಆಸ್ಪತ್ರೆ ಸಂಸ್ಥಾಪಕ ಡಾ. ಹರಿಶ್ಚಂದ್ರ  ಪುಷ್ಪಾರ್ಚನೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಂಸ್ಕೃತಿ ವಿಶ್ವ ಪ್ರತಿಸ್ಥಾನ ಸ್ಥಾಪಕ ವಿಶ್ವನಾಥ ಶೆಣೈ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ಉಡುಪಿ ಜಿಲ್ಲೆ ಇದರ ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್ ಭಾಗವಹಿಸಲಿದ್ದಾರೆ. ಉರಗ ತಜ್ಞರಾದ ಗುರುರಾಜ್ ಸನಿಲ್ ಅಭಿನಂದನಾ ಮಾತಗಳನ್ನಾಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಲಕ್ಷ್ಮಣ್ ಕೋಲ್ಕಾರ್, ಕುಮಾರ್ ಪ್ರಸಾದ್, ಬಸವರಾಜ್ ಐಹೊಳೆ, ಕಾಳಪ್ಪ ಹರಗಿ ಹಾಗೂ ಇತರರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article