-->
 ಅ.28: ಮೆಸ್ಕಾಂ ಇಲಾಖೆಯ ವೈಫಲ್ಯ ಖಂಡಿಸಿ ಬಿಜೆಪಿಯಿಂದ ಪಂಜಿನ ಮೆರವಣಿಗೆ

ಅ.28: ಮೆಸ್ಕಾಂ ಇಲಾಖೆಯ ವೈಫಲ್ಯ ಖಂಡಿಸಿ ಬಿಜೆಪಿಯಿಂದ ಪಂಜಿನ ಮೆರವಣಿಗೆ


ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ವತಿಯಿಂದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮೆಸ್ಕಾಂ ವೈಫಲ್ಯ ಖಂಡಿಸಿ ಅ. 28ರಂದು ಪಂಜಿನ ಮೆರವಣಿಗೆ, ಪ್ರತಿಭಟನಾ ಜಾಥ ನಡೆಸುವುದಾಗಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹೇಳಿದ್ದಾರೆ.

ಅ. 28 ಸಂಜೆ 6.30ಕ್ಕೆ ಉಡುಪಿ ಬೋರ್ಡ್ ಹೈಸ್ಕೂಲ್ ಬಳಿಯಿಂದ ಆರಂಭಗೊಳ್ಳುವ ಪಂಜಿನ ಮೆರವಣಿಗೆ  ಕೆ. ಎಂ. ಮಾರ್ಗವಾಗಿ ಸಾಗಿ ಡಯಾನಾ ಸರ್ಕಲ್ ನಿಂದ ಮೆಸ್ಕಾಂ ಕಚೇರಿ ಬಳಿ ಸಮಾಪನಗೊಳ್ಳಲಿದೆ.

ಉಡುಪಿ  ಜಿಲ್ಲೆಯಾದ್ಯಂತ ನಿರಂತರ ಪವರ್ ಕಟ್, ಲೋ ವೋಲ್ಟೇಜ್ ಸಮಸ್ಯೆ,ವಿದ್ಯುತ್ ಕಣ್ಣಾಮುಚ್ಚಾಲೆ, ಟ್ರಾನ್ಸ್ ಫಾರ್ಮರ್ ಕೊರತೆ, ಕಳಪೆ ನಿರ್ವಹಣೆ, ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಮೊದಲಾದ ಸಂಸ್ಯೆಗಳಿಂದ ಜಿಲ್ಲೆಯ ಜನತೆ ಸಮಸ್ಯೆ ಎದುರಿಸುವಂತಾಗಿದೆ. ರಾಜ್ಯ ಸರ್ಕಾರ ತಕ್ಷಣ ಮೆಸ್ಕಾಂ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಿ ಜಿಲ್ಲೆಯ ಜನತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಿನೇಶ್ ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Ads on article

Advertise in articles 1

advertising articles 2

Advertise under the article