-->
 ಉದ್ಯಾವರ ಪ್ರಜಾಸೇವಾ ಆಂದೋಲನ ಸಭೆ: 35 ಅರ್ಜಿ ಸ್ವೀಕಾರ, 17 ಫಲಾನುಭವಿಗಳಿಗೆ ಸಹಾಯಧನ ವಿತರಣೆ

ಉದ್ಯಾವರ ಪ್ರಜಾಸೇವಾ ಆಂದೋಲನ ಸಭೆ: 35 ಅರ್ಜಿ ಸ್ವೀಕಾರ, 17 ಫಲಾನುಭವಿಗಳಿಗೆ ಸಹಾಯಧನ ವಿತರಣೆ


ಪ್ರಜಾಸೇವೆ ಇಲಾಖೆ ಹಾಗೂ ತಾಲೂಕು ಆಡಳಿತ ಉಡುಪಿ ವತಿಯಿಂದ ಉದ್ಯಾವರದ ಶ್ರೀ ನಾರಾಯಣಗುರು ಸಭಾಭವನದಲ್ಲಿ ಪ್ರಜಾಸೇವಾ ಆಂದೋಲನ ಸಭೆಯು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.


ಸಭೆಯಲ್ಲಿ ಶೇ. 5ರ ನಿಧಿಯಡಿ 17 ಫಲಾನುಭವಿಗಳಿಗೆ ಅಂಗವಿಕಲರ ಸಹಾಯಧನದ ಚೆಕ್‌ಗಳನ್ನು ವಿತರಿಸಲಾಯಿತು. ರಸ್ತೆ, ದಾರಿದೀಪ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಸಮಸ್ಯೆಗಳ ಕುರಿತು ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಸಾರ್ವಜನಿಕರಿಂದ ಒಟ್ಟು 35 ಅರ್ಜಿಗಳನ್ನು ಸ್ವೀಕರಿಸಲಾಯಿತು.


ಮೆಸ್ಕಾಂ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು, ಅಕ್ರಮ-ಸಕ್ರಮ, ನಿವೇಶನ, ಹಕ್ಕುಪತ್ರ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಡಿ ಸೌಲಭ್ಯ ಪಡೆಯುವಲ್ಲಿನ ತೊಂದರೆಗಳ ಬಗ್ಗೆಯೂ ಅಹವಾಲುಗಳನ್ನು ಸ್ವೀಕರಿಸಲಾಯಿತು. 


ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ತಹಶೀಲ್ದಾರ್ ಗುರುರಾಜ್, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯ, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಉದ್ಯಾವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article