ಎಚ್ಐವಿ, ಏಡ್ಸ್ ಕುರಿತು ಜಾಗೃತಿ: ಉಡುಪಿಯಲ್ಲಿ 5 ಕಿ.ಮೀ. ಮ್ಯಾರಥಾನ್
Friday, October 16, 2026
ಎಚ್ಐವಿ ಮತ್ತು ಏಡ್ಸ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಿಗಾಗಿ 5 ಕಿ.ಮೀ. ಮ್ಯಾರಥಾನ್ ಸ್ಪರ್ಧೆಯನ್ನು ಶುಕ್ರವಾರ ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.
ಬೆಳಗ್ಗೆ 7 ಗಂಟೆಗೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಅವರು ಮ್ಯಾರಥಾನ್ಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಲಯನ್ಸ್ ಜಿಲ್ಲೆ 317Cರ ಪ್ರಥಮ ಉಪ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಎಚ್ಐವಿ ಮತ್ತು ಏಡ್ಸ್ ಕುರಿತು ಯುವಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿಯ ಸಂದೇಶವನ್ನು ಸಾರುವ ಉದ್ದೇಶದಿಂದ ಈ ಮ್ಯಾರಥಾನ್ ಆಯೋಜಿಸಲಾಗಿತ್ತು.


