-->
 ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ 50 ಸಾವಿರ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ 50 ಸಾವಿರ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ


ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂಸೇವಾ ಸಂಸ್ಥೆಗಳ ಮೂಲಕ ಆಯೋಜಿಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಪ್ರತಿ ಜೋಡಿಗೆ 50,000 ಸಹಾಯಧನ ನೀಡಲಾಗುತ್ತದೆ.

ಅರ್ಹರು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದು. ಅಲ್ಲದೆ, ಉಡುಪಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ 0820-2574596, ಕುಂದಾಪುರದ 08254-23070 ಹಾಗೂ ಕಾರ್ಕಳದ 08258-231101 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article