-->
 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ


ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಹಿರಿಯಡ್ಕ ಪೊಲೀಸರು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬಂಧಿಸಿದ್ದಾರೆ.

ಬಂಧಿತನನ್ನು ಶಿವಮೊಗ್ಗ ಮೂಲದ ಎಚ್. ವೆಂಕಟೇಶ್ ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಹಿರಿಯಡ್ಕ ಠಾಣೆಯಲ್ಲಿ 2005ರಿಂದ 2008ರ ಅವಧಿಯಲ್ಲಿ ಕಳವು ಹಾಗೂ ಮನೆಗೆ ಅಕ್ರಮ ಪ್ರವೇಶಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಕಳದ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಆರೋಪಿಯ ವಿರುದ್ಧ ವಾರಂಟ್ ಜಾರಿಯಾಗಿತ್ತು.

2009ರಲ್ಲಿ ಜಾಮೀನು ಪಡೆದು ಹೊರಬಂದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವೆಂಕಟೇಶ್‌ನನ್ನು 2017ರಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮತ್ತೆ ಜಾಮೀನು ಪಡೆದು ಹೊರಬಂದ ಆತ, ಕಳೆದ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಪ್ರಕರಣಗಳು LPC ಹಂತದಲ್ಲಿದ್ದು, ಆರೋಪಿಯ ವಿರುದ್ಧ ವಾರಂಟ್ ಜಾರಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅ.3ರಂದು ರಾತ್ರಿ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ವೆಂಕಟೇಶ್‌ನನ್ನು ಬಂಧಿಸಿದ್ದಾರೆ. ಅ.4ರಂದು ಕಾರ್ಕಳದ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅ.17ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಳಿಕ ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿಸಲಾಗಿದೆ.


ಕಾರ್ಯಾಚರಣೆಯಲ್ಲಿ ಪಿಎಸ್‌ಐ ನವೀನ್ ಬೊರ್ಕರ್, ಠಾಣಾ ಹೆಡ್ ಕಾನ್‌ಸ್ಟೆಬಲ್ ಚಂದ್ರ ಬಿಲ್ಲವ,  ಸಂತೋಷ್ ಹಾಗೂ ಸಿದ್ರಾಯ್ಯಪ್ಪ ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article