-->
 ಉಡುಪಿ: ಮದ್ಯಮುಕ್ತ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಜಾಥಾ, ಗಾಂಧಿ ಸ್ಮೃತಿ

ಉಡುಪಿ: ಮದ್ಯಮುಕ್ತ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಜಾಥಾ, ಗಾಂಧಿ ಸ್ಮೃತಿ


ಮದ್ಯಪಾನ ಸೇರಿದಂತೆ ವಿವಿಧ ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಸುಸ್ಥಿರ ಸಮಾಜ ನಿರ್ಮಿಸುವ ಉದ್ದೇಶದಿಂದ ಗಾಂಧಿ ಜಯಂತಿ ಅಂಗವಾಗಿ ಜನಜಾಗೃತಿ ಜಾಥಾ ಹಾಗೂ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಅಕ್ಟೋಬರ್ 3ರಂದು ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಯಿತು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಉಡುಪಿ ಹಾಗೂ ಕಾಪು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಧರ್ಮಸ್ಥಳ ಹಾಗೂ ಜನಜಾಗೃತಿ ವೇದಿಕೆ ಉಡುಪಿ ಮತ್ತು ಕಾಪು ತಾಲೂಕುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.


ಜನಜಾಗೃತಿ ಜಾಥಾಕ್ಕೆ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ಎನ್.ಬಿ. ವಿಜಯ ಬಲ್ಲಾಳ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆ. ವಿಜಯ ಕೊಡವೂರು, ಸುಂದರ್ ಕಲ್ಮಡಿ, ನವೀನ್ ಅಮೀನ್, ಶಿವಕುಮಾರ್, ಗೀತಾಂಜಲಿ ಸುವರ್ಣ, ಸತ್ಯಾನಂದ ನಾಯಕ್ ಸೇರಿದಂತೆ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.


ನಂತರ ನಡೆದ ಗಾಂಧಿ ಸ್ಮೃತಿ ಸಭಾ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷ ದೇವದಾಸ್ ಹೆಬ್ಬಾರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಿವಕುಮಾರ್, ನವೀನ್ ಅಮೀನ್, ಕೃಷ್ಣ ಶೆಟ್ಟಿ, ಸುಂದರ್ ಕಲ್ಮಡಿ, ಗೋಪಾಲಕೃಷ್ಣ ಶೆಟ್ಟಿ ಸೇರಿದಂತೆ ವಿವಿಧ ವಲಯಗಳ ಅಧ್ಯಕ್ಷರು, ಸದಸ್ಯರು ಹಾಗೂ ನವಜೀವನ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಮದ್ಯಪಾನ ಹಾಗೂ ಇತರ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ದುಶ್ಚಟಮುಕ್ತ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಜನರನ್ನು ಪ್ರೇರೇಪಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.

ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯಕ್ ಸ್ವಾಗತಿಸಿದರು. ಮೇಲ್ವಿಚಾರಕರಾದ ಪ್ರೇಮ ಹಾಗೂ ಬಾಲಚಂದ್ರ ಕಾರ್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article