-->
 ಡಿಸಿಎಂ ಡಾ. ಜಿ. ಪರಮೇಶ್ವರ್‌ಗೆ ಎದೆನೋವು: ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಡಿಸಿಎಂ ಡಾ. ಜಿ. ಪರಮೇಶ್ವರ್‌ಗೆ ಎದೆನೋವು: ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ


ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ವಸಂತನಗರದಲ್ಲಿರುವ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್-2026’ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಸದ್ಯ ವೈದ್ಯಕೀಯ ತಂಡ ಅವರ ಆರೋಗ್ಯದ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಪರಮೇಶ್ವರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article