ಅಂಪಾರು–ಬಾಲಾಡಿಯಲ್ಲಿ ದಲಿತ ಹಕ್ಕುಗಳ ಸಮಿತಿ ಸಭೆ
Monday, October 05, 2026
ದಲಿತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನೆ ಮತ್ತಷ್ಟು ಬಲಿಷ್ಠವಾಗಬೇಕು. ಸಂಘಟನೆಯೇ ದಲಿತರ ಶಕ್ತಿ ಎಂದು ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಹೇಳಿದರು.
ಅಂಪಾರು–ಬಾಲಾಡಿಯಲ್ಲಿ ನಡೆದ ಅಂಪಾರು–ಬಾಲಾಡಿ DHS ಘಟಕದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘಟನೆಯ ವತಿಯಿಂದ ನಡೆಯುತ್ತಿರುವ ವಿವಿಧ ಹೋರಾಟಗಳು ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಮನೋಜ್ ಅವರು ಸ್ಥಳೀಯವಾಗಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸಭೆಯ ಗಮನಕ್ಕೆ ತಂದು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟಗಳು ಹಾಗೂ ಸಂಘಟನೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಗುರುಮೂರ್ತಿ ಅವರು ಸಂಘಟನೆಯ ಮಹತ್ವ, ಒಗ್ಗಟ್ಟು ಹಾಗೂ ಸದಸ್ಯರ ಸಕ್ರಿಯ ಭಾಗವಹಿಸುವಿಕೆಯ ಅಗತ್ಯತೆಯನ್ನು ವಿವರಿಸಿದರು.
ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಹೆಚ್ಚಿನ ಜನರನ್ನು ಸಂಘಟನೆಯೊಂದಿಗೆ ಸಂಪರ್ಕಿಸುವುದು ಹಾಗೂ ಸಾರ್ವಜನಿಕರಲ್ಲಿ ಸಂಘಟನೆಯ ಕುರಿತು ಅರಿವು ಮೂಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ನಿವೇಶನ ಹಾಗೂ ವಸತಿ ರಹಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳನ್ನು ಒಗ್ಗೂಡಿಸಿ, ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೆ, ಸಂಘಟನೆಯ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ನಡೆಸುವ ಉದ್ದೇಶದಿಂದ ಪ್ರತಿ ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಬಾಬು ಬಳ್ಕೂರು, ರಾಜೀವ, ಜಯರಾಮ, ಸುವರ್ಣ, ಜಯಕರ, ಭೋಜ, ನಾಗರಾಜ, ಮಂಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
.jpeg)
