ಉಡುಪಿ ಜಿಲ್ಲಾ ಕಾರಾಗೃಹದ ಸ್ಥಿತಿಗತಿ ಪರಿಶೀಲನೆ: ಮೂಲಸೌಕರ್ಯ ಅಭಿವೃದ್ಧಿಗೆ ಚರ್ಚೆ
Saturday, October 24, 2026
ಉಡುಪಿ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆಯು ಅ. 23ರಂದು ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು.
ಸಭೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ, ಜಿಲ್ಲಾ ಕಾರಾಗೃಹದ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಕಾರಾಗೃಹದಲ್ಲಿರುವ ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದು, ಅವುಗಳ ಅಭಿವೃದ್ಧಿ ಹಾಗೂ ಅಗತ್ಯ ಸೌಲಭ್ಯಗಳ ಕಲ್ಪಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

