-->
ಎಸ್.ಐ.ಆರ್. ಅಕ್ರಮ: ಎಫ್.ಐ.ಆರ್. ದಾಖಲಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಧರಣಿ

ಎಸ್.ಐ.ಆರ್. ಅಕ್ರಮ: ಎಫ್.ಐ.ಆರ್. ದಾಖಲಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಧರಣಿ


ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪಿಗಳ ವಿರುದ್ಧ ಪ್ರಥಮ ವರ್ತಮಾನ ವರದಿ ದಾಖಲಿಸುವಂತೆ ಒತ್ತಾಯಿಸಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿ (ಸಿಇಒ) ವಿ. ಅನ್ಬುಕುಮಾರ್ ಅವರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. 

ಗುರುವಾರ ಸಂಜೆ 5 ಗಂಟೆಯ ಬಳಿಕ ಸಿಇಒ ಅವರು ಎಫ್.ಐ.ಆರ್. ದಾಖಲಿಸುವ ಬಗ್ಗೆ  ಸ್ಪಷ್ಟ ನಿರ್ಧಾರ ಕೈಗೊಳ್ಳುವವರೆಗೆ ಅಲ್ಲಿಯೇ ಧರಣಿ ಮುಂದುವರಿಸುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವಂತೆ ಕೋರಿ ಸಲ್ಲಿಸಲಾದ ಫಾರ್ಮ್-7 ಅಕ್ರಮ ಅರ್ಜಿಗಳನ್ನು ಪ್ರದರ್ಶಿಸಿದರು. ಮತದಾರರ ಹೆಸರುಗಳನ್ನು ಮೊದಲೇ ನಮೂದಿಸಲಾಗಿರುವ ಈ ಅರ್ಜಿಗಳನ್ನು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಪ್ರಮಾಣದಲ್ಲಿ ಸಲ್ಲಿಸಿದ್ದಾರೆ ಎಂದು ಅವರು ಆರೋಪಿಸಿದರು.

“ಇದೊಂದು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳ ಅರ್ಹ ಮತದಾರರ ಹೆಸರುಗಳನ್ನು ಅಳಿಸುವ ಬಹು ದೊಡ್ಡ ಕ್ರಿಮಿನಲ್ ಸಂಚು,” ಎಂದು ಶಿವಕುಮಾರ್ ಆರೋಪಿಸಿದರು.

ಸಚಿವರುಗಳಾದ ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ಜಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ, ರಿಜ್ವಾನ್ ಅರ್ಷದ್, ಡಾ. ಯತೀಂದ್ರ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. 

Ads on article

Advertise in articles 1

advertising articles 2

Advertise under the article