ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
Thursday, October 08, 2026
ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ನಿವಾಸಿ ವಿಶ್ವ ಬಂಧಿತ ಆರೋಪಿ. ಈತ ಪ್ರಕರಣದ ವಿಚಾರಣೆಗೆ ಸತತವಾಗಿ ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಅ.6ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪ್ರವೀಣ್ ಹಾಗೂ ಪಿ.ಸಿ. ಲಿಂಗರಾಜು ಅವರು ಹಾಸನದಲ್ಲಿ ವಿಶ್ವನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.