-->
ಪ್ರಜ್ಞಾವಂತ ಮತದಾರರು ಬಿಜೆಪಿ, ಜೆಡಿಎಸ್ ನ ಡೋಂಗಿ ಹೇಳಿಕೆಗಳಿಗೆ ಮರುಳಾಗದಿರಿ: ಸುರೇಶ ಶೆಟ್ಟಿ ಬನ್ನಂಜೆ

ಪ್ರಜ್ಞಾವಂತ ಮತದಾರರು ಬಿಜೆಪಿ, ಜೆಡಿಎಸ್ ನ ಡೋಂಗಿ ಹೇಳಿಕೆಗಳಿಗೆ ಮರುಳಾಗದಿರಿ: ಸುರೇಶ ಶೆಟ್ಟಿ ಬನ್ನಂಜೆ


ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಮೂಲಕ ಮತ ಕಳ್ಳತನಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಯತ್ನಿಸುತ್ತಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಹಾಗೂ ಉಡುಪಿ ನಗರಸಭೆ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ.

ಕಾಂಗ್ರೆಸ್‌ನ ಸಾಂಪ್ರದಾಯಿಕ ಮತದಾರರಾದ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ರೈತರು ಸೇರಿದಂತೆ ಬಡ ಹಾಗೂ ಮಧ್ಯಮ ವರ್ಗದ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ.ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಚುನಾವಣಾ ಆಯೋಗದ ಮುಖ್ಯಸ್ಥರನ್ನು ಭೇಟಿಯಾಗಿ, ಅರ್ಹ ಮತದಾರರಿಗೆ ಮತದಾನದ ಹಕ್ಕು ಖಚಿತಪಡಿಸುವಂತೆ ಮನವಿ ಸಲ್ಲಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಸುರೇಶ್ ಶೆಟ್ಟಿ ತಿಳಿಸಿದ್ದಾರೆ.

ಮತದಾರರ ಹಕ್ಕಿನ ಪರವಾಗಿ ಮುಖ್ಯಮಂತ್ರಿ ಕೈಗೊಂಡಿರುವ ಈ ಕ್ರಮದಿಂದ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಆತಂಕ ಉಂಟಾಗಿದೆ. ಹೀಗಾಗಿ ಕಾಂಗ್ರೆಸ್ ಹಾಗೂ ಡಿ.ಕೆ. ಶಿವಕುಮಾರ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದ ನಿಷ್ಠಾವಂತ ಮತದಾರರು ಇಂತಹ ಹೇಳಿಕೆಗಳಿಗೆ ಕಿವಿಗೊಡದೆ, ತಮ್ಮ ಮತದಾನದ ಹಕ್ಕಿನ ಬಗ್ಗೆ ಜಾಗೃತರಾಗಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದು ಸುರೇಶ್ ಶೆಟ್ಟಿ ಬನ್ನಂಜೆ ಕರೆ ನೀಡಿದ್ದಾರೆ.

ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಅರ್ಹ ಮತದಾರರ ಮರುಸೇರ್ಪಡೆ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಹೋರಾಟದಿಂದ ದೇಶದ ಕೋಟ್ಯಂತರ ಮತದಾರರಿಗೆ ತಮ್ಮ ಹಕ್ಕು ಮರಳಿ ಪಡೆಯುವ ಅವಕಾಶ ಸಿಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಮತ್ತು ರೈತರ ಮತವನ್ನು ಡಿಲೀಟ್ ಮಾಡಿ ಮುಂದಿನ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಯನ್ನು ಏರುವ ಕನಸು ಕಂಡ ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕನಸನ್ನು ರಾಜ್ಯದ ಡೈನಮಿಕ್ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಭಗ್ನಗೊಳಿಸಿದ್ದಾರೆ. ರಾಜ್ಯದ ಮತದಾರರಿಗಾಗಿ ತಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆ ರಾಜ್ಯದ ಚುನಾವಣಾ ಆಯೋಗದ ಮುಖ್ಯಸ್ಥರ ಜೊತೆ ರಾಜ್ಯದ ಮತದಾರರ ಪರವಾಗಿ ಮನವಿಯನ್ನು ನೀಡಿ ಎಲ್ಲರಿಗೂ ಮತದಾನದ ಹಕ್ಕು ನೀಡುವಂತೆ ಒತ್ತಾಯಿಸಿದ್ದಾರೆ. ಇದು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಅನಿರೀಕ್ಷಿತ ಹೊಡೆತವನ್ನು ನೀಡಿದ್ದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಂಗಾಲಾಗಿ ಹೋಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷ ಮತ್ತು ಡಿಕೆ ಶಿವಕುಮಾರ್ ಅವರ ವಿರುದ್ಧ ಸುಳ್ಳು ಹೇಳಿಕೆಯನ್ನು ನೀಡಿ ಜನಸಾಮಾನ್ಯರನ್ನು ಮೋಸಗೊಳಿಸಲು ಯತ್ನಿಸುತ್ತಿದ್ದಾರೆ. ಮತದಾರರು ಈ ಬಿಜೆಪಿ, ಜೆಡಿಎಸ್ ನಾಯಕರ ಈ ಡೋಂಗಿ ಹೇಳಿಕೆಗಳಿಗೆ ಬಲಿಯಾಗದೆ ಸಂಪೂರ್ಣವಾಗಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಂಪೂರ್ಣವಾಗಿ ಅಧಿಕಾರಕ್ಕೆ ಬರದಂತೆ ತಡೆಯಬೇಕಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇವರು ಮತದಾರರ ಪರವಾಗಿ ಮಾಡಿದ ಈ ಪ್ರತಿರೋಧದಿಂದಾಗಿ ದೇಶದ 13 ಕೋಟಿ ಮತದಾರರು ಇಂದು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಸಾಧ್ಯವಾಗುತ್ತಿದೆ ಎಂದರು.

Ads on article

Advertise in articles 1

advertising articles 2

Advertise under the article