-->
 ಪಡುಬಿದ್ರಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯಿಂದ ಅಂಗನವಾಡಿಗಳಿಗೆ ಏರ್ ಕೂಲರ್ ಕೊಡುಗೆ

ಪಡುಬಿದ್ರಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯಿಂದ ಅಂಗನವಾಡಿಗಳಿಗೆ ಏರ್ ಕೂಲರ್ ಕೊಡುಗೆ


ನಾಲ್ಕು ವರ್ಷಗಳ ಹಿಂದೆ ಪಡುಬಿದ್ರಿಯಲ್ಲಿ ಆರಂಭಗೊಂಡ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಶಾಖೆಯು ಸ್ಥಳೀಯವಾಗಿ ಉತ್ತಮ ವ್ಯವಹಾರದೊಂದಿಗೆ ಜನರ ಪ್ರೀತಿ, ವಿಶ್ವಾಸ ಗಳಿಸಿರುವುದಲ್ಲದೆ, ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಅಭಿನಂದನೀಯ ಎಂದು ಪಡುಬಿದ್ರಿ ಇಎಸ್‌ಐ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ. ಸಾತ್ವಿಕ್ ಪ್ರಮೋದ್ ಹೇಳಿದರು.


ಅವರು ಪಡುಬಿದ್ರಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸ್ಥಳೀಯ ಅಂಗನವಾಡಿ ಕೇಂದ್ರಗಳಿಗೆ ಏರ್ ಕೂಲರ್ ವಿತರಿಸಿ ಮಾತನಾಡಿದರು. ಸೊಸೈಟಿಯು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಜ್ಯ ಪ್ರಶಸ್ತಿ ವಿಜೇತ ಸಾಹಿತಿ ಫಾತಿಮಾ ರಲಿಯಾ ಹೆಜಮಾಡಿ ಮಾತನಾಡಿ, ಸೊಸೈಟಿಯು ಕೇವಲ ವ್ಯವಹಾರಕ್ಕೆ ಸೀಮಿತವಾಗದೆ, ಅಂಗನವಾಡಿಗಳ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ಮುಂದುವರಿಯಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ಎಚ್. ವಸಂತ್ ಬೆರ್ನಾರ್ಡ್ ಮಾತನಾಡಿ, ಪಡುಬಿದ್ರಿ ಶಾಖೆಯು ಉತ್ತಮ ಲಾಭದೊಂದಿಗೆ ಅಭಿವೃದ್ಧಿ ಹೊಂದಲು ಸಹಕರಿಸಿದ ಸ್ಥಳೀಯ ಗ್ರಾಹಕರು, ಸದಸ್ಯರು ಹಾಗೂ ಮಾಧ್ಯಮ ಮಿತ್ರರಿಗೆ ಕೃತಜ್ಞತೆ ಸಲ್ಲಿಸಿದರು.

ಅಬ್ಬೇಡಿ ಅಂಗನವಾಡಿ ಕೇಂದ್ರದ ಶ್ಯಾಮಲಾ, ಗಣಪತಿ ದೇವಸ್ಥಾನ ಕೆಳಗಿನಪೇಟೆ ಅಂಗನವಾಡಿ ಕೇಂದ್ರದ ಅನಿತಾ, ಸಾಗರ್ ವಿದ್ಯಾಮಂದಿರ ಅಂಗನವಾಡಿ ಕೇಂದ್ರದ ಶೋಭಾ ಹಾಗೂ ಬೀಡಿನಕೆರೆ ಅಂಗನವಾಡಿ ಕೇಂದ್ರದ ಲೀಲಾ ಅವರು ಸೊಸೈಟಿಯ ಕೊಡುಗೆಗೆ ಕೃತಜ್ಞತೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಸೊಸೈಟಿಯ ನಿರ್ದೇಶಕರಾದ ಗಣೇಶ್ ಪ್ರಸಾದ್ ದೇವಾಡಿಗ, ಧನಂಜಯ ಮಟ್ಟು ಹಾಗೂ ಅನಿಲ್ ಪೂಜಾರಿ ಸಸಿಹಿತ್ಲು ಉಪಸ್ಥಿತರಿದ್ದರು. ಶಾಖಾ ಪ್ರಬಂಧಕಿ ಅಂಜಲಿ ಉಳ್ಳಾಲ್ ಎಸ್. ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ ವಂದಿಸಿದರು. ಸಿಬ್ಬಂದಿಗಳಾದ ಪರ್ಣಾಲಿ ಕಿಣಿ ಮತ್ತು ರಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article