ಸೌಜನ್ಯ ಪ್ರಕರಣ ಮರು ತನಿಖೆ: ಎಸ್‌ಐಟಿ ಮುಖ್ಯಸ್ಥರಾಗಿ ಚೇತನ್‌ಸಿಂಗ್ ರಾಥೋಡ್ ನೇಮಕ
Friday, October 30, 2026
ಬೆಳ್ತಂಗಡಿಯ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಚೇತನ್‌ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡಲಾಗಿದೆ.
ಸಿಐಡಿ ಐಜಿಪಿಯಾಗಿರುವ ಚೇತನ್‌ಸಿಂಗ್ ರಾಥೋಡ್ ಅವರು ಈ ಹಿಂದೆ ಎಸ್‌ಐಟಿ ಮುಖ್ಯಸ್ಥರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರ ಸ್ಥಾನವನ್ನು ತುಂಬಲಿದ್ದಾರೆ. ವೈಯಕ್ತಿಕ ಕೋರಿಕೆಯ ಮೇರೆಗೆ ಶಶಿಕುಮಾರ್ ಅವರು ಎಸ್‌ಐಟಿಯಿಂದ ಹಿಂದೆ ಸರಿಯಲು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ಈ ಬದಲಾವಣೆ ಮಾಡಿದೆ.
ಇದೇ ವೇಳೆ, ಎಸ್‌ಐಟಿ ಸದಸ್ಯರಾಗಿದ್ದ ವೆಂಕಟೇಶ್ ಪ್ರಸನ್ನ ಅವರೂ ಕೂಡಾ ಎಸ್ಐಟಿಯಿಂದ ತಮ್ಮ ಹೆಸರನ್ನು ಕೈಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರನ್ನೂ ತಂಡದಿಂದ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಹಾಸನ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್ಪಿ) ಶ್ರೀನಿಧಿ ಅವರನ್ನು ನೇಮಕ ಮಾಡಲಾಗಿದೆ.