-->
ದ. ಕ, ಉಡುಪಿಯಲ್ಲಿ ಗುಡುಗು ಸಹಿತ ಮಳೆ: ಹಲವೆಡೆ ವಿದ್ಯುತ್ ವ್ಯತ್ಯಯ : ಇಂದೂ ಕೂಡ ಮಳೆ ಸಾಧ್ಯತೆ

ದ. ಕ, ಉಡುಪಿಯಲ್ಲಿ ಗುಡುಗು ಸಹಿತ ಮಳೆ: ಹಲವೆಡೆ ವಿದ್ಯುತ್ ವ್ಯತ್ಯಯ : ಇಂದೂ ಕೂಡ ಮಳೆ ಸಾಧ್ಯತೆ


ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು ಸಹಿತ ಭಾರೀ ಮಳೆಯಾಗಿದೆ
.

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಆರಂಭವಾದ ಮಳೆ ರಾತ್ರಿ ವೇಳೆಯೂ ಮುಂದುವರಿದಿದ್ದು, ಹಲವೆಡೆ ಗುಡುಗು ಹಾಗೂ ಮಿಂಚಿನೊಂದಿಗೆ ಭಾರೀ ಮಳೆಯಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಗುಡುಗು ಸಿಡಿಲು ಸಹಿತ ನಿರಂತರವಾಗಿ ಮಳೆಯಾಗುತ್ತಿದ್ದು, ಬೆಳ್ತಂಗಡಿ, ಕಡಬ ಸವಣೂರು ಸುಳ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. 

ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಸಾಧಾರಣ ಮಳೆ ಸುರಿದಿದೆ. ಉಡುಪಿ, ಮಣಿಪಾಲ ಸಂತೆಕಟ್ಟೆ, ಬ್ರಹ್ಮಾವರ ಕಾಪು ಸೇರಿದಂತೆ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಿದೆ.

 ಮಳೆಯಿಂದಾಗಿ ಕಾರ್ಕಳ, ಬಜಗೋಳಿ, ಸಾಣೂರು, ಕೆರ್ವಾಶೆ ಹಾಗೂ ಬೈಲೂರು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಕೆಲವೆಡೆ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. 

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಇಂದು ಕೂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Ads on article

Advertise in articles 1

advertising articles 2

Advertise under the article