ಅಂಗನವಾಡಿ ಶಿಕ್ಷಕರಿಗೂ ಸರ್ಕಾರಿ ಉದ್ಯೋಗದ ಸೌಲಭ್ಯ ಸಿಗಲಿ : ಶಾಸಕ ಯಶ್ಪಾಲ್ ಸುವರ್ಣ
ಪ್ರಧಾನಿ ನರೇಂದ್ರ ಮೋದಿ ಅವರು ನಿರಂತರ 25 ವರ್ಷಗಳ ರಾಷ್ಟ್ರ ಸೇವೆ ಪೂರೈಸಿರುವ ಹಿನ್ನೆಲೆಯಲ್ಲಿ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಅಂಗಳದ ಉತ್ಸವ ಕಾರ್ಯಕ್ರಮದಲ್ಲಿ ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಉಡುಪಿ ನಗರ ವ್ಯಾಪ್ತಿಯ 115 ಅಂಗವಾನಡಿ ಕೇಂದ್ರಗಳ ಶಿಕ್ಷಕಿ ಹಾಗೂ ಸಹಾಯಕರಿಗೆ ಅಭಿನಂದನಾ ಸಮಾರಂಭ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು. ಬಳಿಕ ಅಂಗನವಾಡಿ ಶಿಕ್ಷಕಿಯರಿಗೆ ಸನ್ಮಾನ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ, ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಮಕ್ಕಳ ಪೌಷ್ಟಿಕತೆ, ಆರೋಗ್ಯ, ಪೂರ್ವ ಪ್ರಾಥಮಿಕ ಶಿಕ್ಷಣದ ಜೊತೆಗೆ ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆಯಲ್ಲಿ ವಿಶೇಷ ಕೊಡುಗೆ ನೀಡುತ್ತಿರುವ ಅಂಗನವಾಡಿ ಶಿಕ್ಷಕಿಯರ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸುವ ಕಾರ್ಯ ಅತ್ಯಂತ ಅರ್ಥಪೂರ್ಣವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಅಂಗನವಾಡಿ ಶಿಕ್ಷಕರಿಗೂ ಸರಕಾರಿ ಉದ್ಯೋಗದ ಎಲ್ಲಾ ಸೌಲಭ್ಯಗಳು ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ನಗರ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ನೀತಾ ಪ್ರಭು, ಪಕ್ಷದ ಪ್ರಮುಖರಾದ ಸಂಧ್ಯಾ ರಮೇಶ್, ಶಿಲ್ಪಾ ಜಿ. ಸುವರ್ಣ, ಕಿರಣ್ ಕುಮಾರ್ ಬೈಲೂರು, ಪ್ರಭಾಕರ ಪೂಜಾರಿ,ಶ್ರೀಕಾಂತ ನಾಯಕ್ ಅಲೆವೂರು, ರೇಷ್ಮಾ ಉದಯ ಶೆಟ್ಟಿ, ಶ್ಯಾಮಲಾ ಕುಂದರ್, ಉಡುಪಿ ನಗರ ಬಿಜೆಪಿ ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.