-->
ಯುವಜನರ ಭವಿಷ್ಯಕ್ಕೆ ಕಂಟಕವಾದ ಬಿಜೆಪಿ ಆಡಳಿತ: ಸುರೇಶ್ ಶೆಟ್ಟಿ ವಾಗ್ದಾಳಿ

ಯುವಜನರ ಭವಿಷ್ಯಕ್ಕೆ ಕಂಟಕವಾದ ಬಿಜೆಪಿ ಆಡಳಿತ: ಸುರೇಶ್ ಶೆಟ್ಟಿ ವಾಗ್ದಾಳಿ


ನೀಟ್ ಹಗರಣ ಹಾಗೂ ಮತಗಳ್ಳತನದ ಆರೋಪಗಳ ವಿರುದ್ಧ ದೇಶದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಪ್ರತಿಭಟನಾಕಾರರನ್ನು ಬಂಧಿಸಿ ಜೈಲಿಗೆ ಕಳುಹಿಸುವ ಮೂಲಕ ಅವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ಆಕ್ರೋಶ ಹೊರ ಹಾಕಿದ್ದಾರೆ.

ವಿದ್ಯಾರ್ಥಿಗಳು ಮತ್ತು ಯುವಕರನ್ನೇ ವಿರೋಧಿಗಳಂತೆ ಕಾಣುತ್ತಿರುವ ಬಿಜೆಪಿ ಸರ್ಕಾರದ ಧೋರಣೆ ದೇಶದ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸುವ ಉದ್ದೇಶದಿಂದ ಬಿಜೆಪಿ ಇಂತಹ ಪ್ರವೃತ್ತಿಗೆ ಮುಂದಾಗಿರುವುದು ದುರದೃಷ್ಟಕರ. ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ದೇಶದ 13 ಕೋಟಿ ಜನಸಾಮಾನ್ಯರ ಮತಗಳನ್ನು ಕಬಳಿಸಲಾಗಿದೆ ಎಂಬ ಗಂಭೀರ ಆರೋಪಗಳಿದ್ದು, ಈ ಬಗ್ಗೆ ಸಮರ್ಪಕ ತನಿಖೆ ನಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಇಂದು ದೇಶದ ಯುವಕರನ್ನು ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ದೇಶದ ಯುವಜನತೆ ಅರಿತುಕೊಳ್ಳಬೇಕು ಎಂದರು.

ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಸಗೀಕರಣದ ನೀತಿಗಳಿಂದ ಯುವಕರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ ಅವರು, ದೇಶದ ಯುವಜನತೆಯ ಭವಿಷ್ಯವನ್ನು ಕಡೆಗಣಿಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದರು.


ಕೇಂದ್ರದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ಹಾಗೂ ಮತದಾನದ ಹಕ್ಕಿನ ರಕ್ಷಣೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮುಂದುವರಿಯಲಿದೆ. ದೇಶದ 140 ಕೋಟಿ ಜನರ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಕಾಂಗ್ರೆಸ್ ಸದಾ ಬದ್ಧವಾಗಿದೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article