ಪ್ರಸಾದ್ ರಾಜ್ ಕಾಂಚನ್ ಅವರಿಂದ ಪೊಲೀಸ್ ಇಲಾಖೆಗೆ ಬೊಲೆರೋ ಕೊಡುಗೆ
Thursday, October 08, 2026
ಉಡುಪಿ M/S ಕಾಂಚನ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮಾಲಕರಾದ ಪ್ರಸಾದ್ ರಾಜ್ ಕಾಂಚನ್ ಅವರು ತಮ್ಮ ಸಂಸ್ಥೆಯ CSR ನಿಧಿಯಡಿ ಮಹೇಂದ್ರ ಕಂಪನಿಯ ಬೊಲೆರೋ ಜೀಪ್‌ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಕೊಡುಗೆಯಾಗಿ ನೀಡಿದರು.
ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರು ಜೀಪಿನ ಕೀಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಡಿಎಆರ್ ಪೊಲೀಸ್ ಉಪಾಧೀಕ್ಷಕ ತಿಮ್ಮಪ್ಪ ಗೌಡ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ನಿರೀಕ್ಷಕ ರವಿ ಕುಮಾರ್ ಉಪಸ್ಥಿತರಿದ್ದರು.
