ಬೆಳ್ಳೆ ಗ್ರಾ.ಪಂ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಶಾಸಕ ಗುರ್ಮೆಸುರೇಶ್ ಶೆಟ್ಟಿ ಚಾಲನೆ
Monday, October 26, 2026
ಕಾಪು ವಿಧಾನಸಭಾ ಕ್ಷೇತ್ರದ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ 1.80 ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಇದೇ ವೇಳೆ 60 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಶಾಸಕರ ಶಿಫಾರಸ್ಸಿನ ಮೇರೆಗೆ 1.80 ಕೋಟಿ ಅನುದಾನ ಮಂಜೂರಾಗಿದ್ದು, ಈ ಅನುದಾನದಲ್ಲಿ ಕೈಗೊಂಡ ರಸ್ತೆ ಕಾಮಗಾರಿಗಳು ಪೂರ್ಣಗೊಂಡಿವೆ. ಇದೀಗ ನೂತನ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಲಾಗಿದೆ.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಬೆಳ್ಳೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜೇಂದ್ರ ಶೆಟ್ಟಿ, ಸುಧಾಕರ ಪೂಜಾರಿ, ದಿವ್ಯಾ ಆಚಾರ್ಯ, ಮಾಜಿ ಸದಸ್ಯರಾದ ಗುರುರಾಜ್ ಭಟ್, ಹರೀಶ್ ಶೆಟ್ಟಿ, ಅಶೋಕ್ ತೀರ್ಲಪಲ್ಕೆ, ಸ್ಥಳೀಯರಾದ ಭೋಜು ಪೂಜಾರಿ ಸೇರಿದಂತೆ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

