-->
ಪುತ್ತೂರಿನಲ್ಲಿ ವಿದ್ಯುತ್ ಆಘಾತಗೊಂಡು ಲೈನ್ ಮ್ಯಾನ್ ದಾರುಣ ಸಾವು

ಪುತ್ತೂರಿನಲ್ಲಿ ವಿದ್ಯುತ್ ಆಘಾತಗೊಂಡು ಲೈನ್ ಮ್ಯಾನ್ ದಾರುಣ ಸಾವು


ವಿದ್ಯುತ್ ಲೈನ್‌ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಆಘಾತಕ್ಕೊಳಗಾಗಿ ಲೈನ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆದಿಲದಲ್ಲಿ ನಡೆದಿದೆ.

ಮೃತರನ್ನು ಪುತ್ತೂರಿನ ಕೆಮ್ಮಾಯಿ ನಿವಾಸಿ ರವಿ ಗೌಡ (ಹೆಸರು) ಎಂದು ಗುರುತಿಸಲಾಗಿದೆ. ಅವರು ಮೆಸ್ಕಾಂನಲ್ಲಿ ಲೈನ್‌ಮ್ಯಾನ್‌/ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ವ್ಯಾಪ್ತಿಯ ಕೆದಿಲ, ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು ತಮ್ಮ ಪ್ರಾಮಾಣಿಕ ಸೇವೆಯಿಂದ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಅ.3ರಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಕೆದಿಲ ಶಾಲೆಯ ಸಮೀಪ ಹೈಟೆನ್ಶನ್‌ (HT) ವಿದ್ಯುತ್‌ ಲೈನ್‌ ಕಾಮಗಾರಿ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್‌ ಸ್ಪರ್ಶಿಸಿದ್ದು, ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರವಿ ಗೌಡ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯ ಸಾರ್ವಜನಿಕರು ಹಾಗೂ ಮೆಸ್ಕಾಂ ಸಿಬ್ಬಂದಿ ಸಂತಾಪ ವ್ಯಕ್ತಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article