-->
ಕರಾವಳಿ ಹೈಕೋರ್ಟ್ ಪೀಠ ಹೋರಾಟಕ್ಕೆ ಜಸ್ಟೀಸ್ ಸಂತೋಷ್ ಹೆಗ್ಡೆ ಬೆಂಬಲ

ಕರಾವಳಿ ಹೈಕೋರ್ಟ್ ಪೀಠ ಹೋರಾಟಕ್ಕೆ ಜಸ್ಟೀಸ್ ಸಂತೋಷ್ ಹೆಗ್ಡೆ ಬೆಂಬಲ


ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಬೇಡಿಕೆಗೆ ಬೆಂಬಲ ಕೋರಿ, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕದ ಮಾಜಿ ಲೋಕಾಯುಕ್ತರಾದ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಅವರನ್ನು ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕ ಪ್ರೇಮ್ ಪ್ರಸಾದ್ ಶೆಟ್ಟಿ ಅವರು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕರಾವಳಿ ಭಾಗದ ಜನರಿಗೆ ನ್ಯಾಯಾಂಗ ಸೇವೆಗಳು ಸುಲಭವಾಗಿ ಲಭ್ಯವಾಗುವ ನಿಟ್ಟಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟು, ಹೋರಾಟಕ್ಕೆ ಬೆಂಬಲ ನೀಡುವಂತೆ ಪ್ರೇಮ್ ಪ್ರಸಾದ್ ಶೆಟ್ಟಿ ಮನವಿ ಮಾಡಿದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಅವರು ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಯ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದರು. ಅಲ್ಲದೆ, ಅತೀ ಶೀಘ್ರದಲ್ಲಿ ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವ ಭರವಸೆಯನ್ನೂ ವ್ಯಕ್ತಪಡಿಸಿದರು. ಎ ವೇಳೆ ಪೌರ್ಣಮೀ ಪ್ರೇಮ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article