-->
 ಶ್ರೀ ಮಧ್ವಾಚಾರ್ಯರ ಜಯಂತಿ ಸರ್ಕಾರಿ ಮಟ್ಟದಲ್ಲಿ ಆಚರಣೆಗೆ ಆದೇಶ: ಪುತ್ತಿಗೆ ಶ್ರೀಗಳಿಂದ ಅಭಿನಂದನೆ

ಶ್ರೀ ಮಧ್ವಾಚಾರ್ಯರ ಜಯಂತಿ ಸರ್ಕಾರಿ ಮಟ್ಟದಲ್ಲಿ ಆಚರಣೆಗೆ ಆದೇಶ: ಪುತ್ತಿಗೆ ಶ್ರೀಗಳಿಂದ ಅಭಿನಂದನೆ


ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಪ್ರತಿವರ್ಷ ಕರ್ನಾಟಕ ಸರ್ಕಾರದ ವತಿಯಿಂದ ಅಧಿಕೃತವಾಗಿ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದಕ್ಕೆ ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸಂತಸ ವ್ಯಕ್ತಪಡಿಸಿ, ಸರ್ಕಾರವನ್ನು ಅಭಿನಂದಿಸಿದ್ದಾರೆ.

ಶ್ರೀ ಮಧ್ವಾಚಾರ್ಯರ ಮಹಾನ್ ಸಾಧನೆಗಳು, ತತ್ತ್ವಸಿದ್ಧಾಂತಗಳು ಹಾಗೂ ಅವರು ವಿಶ್ವಕ್ಕೆ ನೀಡಿದ ಅಮೂಲ್ಯ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಮಹತ್ವದ್ದಾಗಿದೆ. ಶ್ರೀ ಮಧ್ವಾಚಾರ್ಯರ ತತ್ತ್ವಾದರ್ಶಗಳು ಹಾಗೂ ಆಧ್ಯಾತ್ಮಿಕ ಕೊಡುಗೆಗಳನ್ನು ವ್ಯಾಪಕವಾಗಿ ಪರಿಚಯಿಸಲು ಇದು ಸಹಕಾರಿಯಾಗಲಿದೆ. ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.


Ads on article

Advertise in articles 1

advertising articles 2

Advertise under the article