-->
 ಮಣಿಪಾಲ: ಮಾರಕಾಯುಧಗಳೊಂದಿಗೆ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಯುವಕನ ಬಂಧನ

ಮಣಿಪಾಲ: ಮಾರಕಾಯುಧಗಳೊಂದಿಗೆ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಯುವಕನ ಬಂಧನ


ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಯುಧಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ ಕಿನ್ನಿಮೂಲ್ಕಿಯ ನಿವಾಸಿ ಮಹಮ್ಮದ್ ಪರ್ವೇಜ್ (26) ಬಂಧಿತ ಆರೋಪಿ. 

ಅಕ್ಟೋಬರ್ 24ರಂದು ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಹಿಡಿದು ನಿಂತಿದ್ದ. ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶಂಭುಲಿಂಗಯ್ಯ ಎಂ.ಇ. ಅವರಿಗೆ ದೊರೆತ ಮಾಹಿತಿಯ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರ್ವೇಜ್ ನನ್ನು ವಶಕ್ಕೆ ಪಡೆಯಲಾಯಿತು. ತಪಾಸಣೆ ನಡೆಸಿದಾಗ, ಆತನ ಬಳಿ ನೀಲಿ ಬಣ್ಣದ ಹಿಡಿಕೆಯುಳ್ಳ ಸುಮಾರು 20 ಇಂಚು ಉದ್ದದ ಕಬ್ಬಿಣದ ಲಾಂಗ್ ಹಾಗೂ ಹಸಿರು ಬಣ್ಣದ ಹಿಡಿಕೆಯುಳ್ಳ ಸುಮಾರು 16 ಇಂಚು ಉದ್ದದ ಕಬ್ಬಿಣದ ಚಾಕು ಪತ್ತೆಯಾಗಿವೆ. ಪೊಲೀಸರ ವಿಚಾರಣೆ ವೇಳೆ, ದಾವೂದ್, ಇಸಾಕ್ ಹಾಗೂ ಗರುಡ ಗ್ಯಾಂಗ್‌ನ ಕೆಲವರೊಂದಿಗೆ ವೈಮನಸ್ಸು ಇದ್ದು, ಅವರ ಮೇಲೆ ಹಲ್ಲೆ ನಡೆಸುವ ಉದ್ದೇಶದಿಂದ ಆಯುಧಗಳನ್ನು ಇಟ್ಟುಕೊಂಡಿರುವುದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಈ ಹಿಂದೆ ಉಡುಪಿ ನಗರ, ಶಿರ್ವ, ಸೆನ್ ಹಾಗೂ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Ads on article

Advertise in articles 1

advertising articles 2

Advertise under the article