-->
ಖರ್ಗೆ ವರ್ತನೆ ಕಾಂಗ್ರೆಸ್ ಅಧಃಪತನಕ್ಕೆ ನಾಂದಿ: ಕುತ್ಯಾರು ನವೀನ್ ಶೆಟ್ಟಿ

ಖರ್ಗೆ ವರ್ತನೆ ಕಾಂಗ್ರೆಸ್ ಅಧಃಪತನಕ್ಕೆ ನಾಂದಿ: ಕುತ್ಯಾರು ನವೀನ್ ಶೆಟ್ಟಿ


ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಳಸಿರುವ ಆಕ್ಷೇಪಾರ್ಹ ಪದಪ್ರಯೋಗ ಖಂಡನೀಯ. ಖರ್ಗೆ ಅವರ ಬೇಜವಾಬ್ದಾರಿಯುತ ವರ್ತನೆ ಕಾಂಗ್ರೆಸ್ ಪಕ್ಷದ ಅಧಃಪತನಕ್ಕೆ ನಾಂದಿ ಹಾಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆರೋಪಿಸಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಖರ್ಗೆ ಅವರು ಬಳಸಿದ ಭಾಷೆ ಅಸಹ್ಯಕರವಾಗಿದೆ. ಪ್ರಧಾನಿ ವಿರುದ್ಧ ಕೀಳುಮಟ್ಟದ ಪದಗಳನ್ನು ಬಳಸುವ ಮೂಲಕ ಖರ್ಗೆ ಅವರು ತಮ್ಮ ಘನತೆಗೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಭಾರತ ಪ್ರಭಾವಶಾಲಿ ಹಾಗೂ ಶಕ್ತಿಯುತ ರಾಷ್ಟ್ರವಾಗಿ ಗುರುತಿಸಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ದಿನೇದಿನೇ ಹೆಚ್ಚುತ್ತಿದೆ. ಇದನ್ನು ಸಹಿಸದ ಕಾಂಗ್ರೆಸ್ ನಾಯಕರು ಹತಾಶೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿಯನ್ನು ಅವಮಾನಿಸಿರುವ ಖರ್ಗೆ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ನವೀನ್ ಶೆಟ್ಟಿ ಆಗ್ರಹಿಸಿದ್ದಾರೆ.

ಪ್ರಧಾನಿ ಮೋದಿ ಅವರನ್ನು ವೈಯಕ್ತಿಕವಾಗಿ ಟೀಕಿಸುವುದು, ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದು ಕಾಂಗ್ರೆಸ್ ನಾಯಕರಿಗೆ ಅಭ್ಯಾಸವಾಗಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್‌ನ ಇಂತಹ ವರ್ತನೆಯನ್ನು ದೇಶದ ಜನರು ಗಮನಿಸುತ್ತಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನವೀನ್ ಶೆಟ್ಟಿ ಕುತ್ಯಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article