ಸಾಮಾಜಿಕ ಕಾರ್ಯಕರ್ತ ಅಬ್ದುಲ್ ರಶೀದ್ ನಿಧನ
Friday, October 23, 2026
ಸಾಮಾಜಿಕ ಕಾರ್ಯಕರ್ತ ಹಾಗೂ ಜಮಿಯತುಲ್ ಫಲಾಹ್ ಉಡುಪಿ ಘಟಕದ ಅಧ್ಯಕ್ಷರಾಗಿದ್ದ ಅಬ್ದುಲ್ ರಶೀದ್ ಮಲ್ಪೆ ಅವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾದರು.
ಖತೀಬ್ ಅಬ್ದುಲ್ ರಶೀದ್ ಅವರು ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿದ್ದರು ಜಮಿಯತುಲ್ ಫಲಾಹ್ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸ್ಥಾಪಕ ಸದಸ್ಯರು ಹಾಗೂ ಮಾಜಿ ಹಿರಿಯ ಉಪಾಧ್ಯಕ್ಷರಾಗಿ,ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ವೇದಿಕೆಯ ಅಧ್ಯಕ್ಷರಾಗಿ, ಸಹಬಾಳ್ವೆ ಆರಂಭಿಕ ಸದಸ್ಯರಲ್ಲಿ ಒಬ್ಬರಾಗಿ ಸೇವೆ ಸಲ್ಲಿಸಿದ್ದರು.
ಅವರ ನಿಧನಕ್ಕೆ ವಿವಿಧ ಸಂಘಟನೆಗಳ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.