ಕರಾವಳಿಯಲ್ಲಿ ಸೋಮವಾರ ಮುಂಜಾನೆಯಿಂದಲೇ ಮಳೆಯಾಗುತ್ತಿದೆ. ಉಡುಪಿಯಲ್ಲಿ ಇಂದು 7 ಗಂಟೆ ಸುಮಾರಿಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಉಡುಪಿ, ಸಂತೆಕಟ್ಟೆ, ಮಣಿಪಾಲ, ಬ್ರಹ್ಮಾವರ, ಕಾಪು, ಕಟಪಾಡಿ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.ಕಳೆದ ಕೆಲ ದಿನಗಳಿಂದ ವಿಪರೀತ ಬಿಸಿಲಿನಿಂದ ಕಂಗೆಟ್ಟಿದ ಜನರು ಕೊಂಚ ನಿರಾಳರಾಗಿದ್ದಾರೆ.