ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಬದಲಾವಣೆ: ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟು ಜಿ.ಯು. ಭಟ್ ಆಯ್ಕೆ
Saturday, October 31, 2026
2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದ ಉಡುಪಿಯ ಹಿರಿಯ ವೈದ್ಯ ಡಾ. ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ತಾಂತ್ರಿಕ ಕಾರಣಗಳಿಂದಾಗಿ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ. ಅವರ ಬದಲಿಗೆ ಉತ್ತರ ಕನ್ನಡ ಜಿಲ್ಲೆಯ ಗಜಾನನ ಉಮಾಮಹೇಶ್ವರ ಭಟ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಮಾಜ ಸೇವೆ ಕ್ಷೇತ್ರದಲ್ಲಿ ಡಾ. ಜಿ.ಎಸ್. ಚಂದ್ರಶೇಖರ್ ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಆದರೆ, ಆಯ್ಕೆ ಪ್ರಕ್ರಿಯೆಯಲ್ಲಿ ಉಂಟಾದ ತಾಂತ್ರಿಕ ಕಾರಣದಿಂದಾಗಿ ಅವರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಅದೇ ಜಿಲ್ಲೆಯವರಾದ ಗಜಾನನ ಉಮಾಮಹೇಶ್ವರ ಭಟ್ ಅವರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಗಜಾನನ ಉಮಾಮಹೇಶ್ವರ ಭಟ್ ಅವರು ಸಾಹಿತ್ಯ, ಪತ್ರಿಕೋದ್ಯಮ, ರಂಗಭೂಮಿ, ಚಲನಚಿತ್ರ ಹಾಗೂ ಕಿರುತೆರೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಸಮಾಜ ಸೇವೆಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.