-->
 ಸಂಟ್ಯಾರ್ ಬಳಿ ಲಾರಿ–ಕಾರು ಡಿಕ್ಕಿ: ಹೆದ್ದಾರಿಯಲ್ಲಿ ಮಗುಚಿದ ಲಾರಿ, ಸಂಚಾರ ಅಸ್ತವ್ಯಸ್ತ

ಸಂಟ್ಯಾರ್ ಬಳಿ ಲಾರಿ–ಕಾರು ಡಿಕ್ಕಿ: ಹೆದ್ದಾರಿಯಲ್ಲಿ ಮಗುಚಿದ ಲಾರಿ, ಸಂಚಾರ ಅಸ್ತವ್ಯಸ್ತ


ರಾಷ್ಟ್ರೀಯ ಹೆದ್ದಾರಿ 275ರ ಪುತ್ತೂರಿನ ಸಂಟ್ಯಾರ್ ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. 

ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರನ್ನು ಲಾರಿ ಓವರ್‌ಟೇಕ್ ಮಾಡಲು ಯತ್ನಿಸಿದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಾಗೂ ಹಾದಿಹೋಕರು ಗಾಯಾಳುಗಳ ನೆರವಿಗೆ ಧಾವಿಸಿ, ಅವರನ್ನು ಆಸ್ಪತ್ರೆಗೆ ರವಾನಿಸಲು ಸಹಕರಿಸಿದರು.

ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಕ್ರೇನ್ ಸಹಾಯದಿಂದ ಮಗುಚಿಬಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. 

Ads on article

Advertise in articles 1

advertising articles 2

Advertise under the article