ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್‌ನಿಂದ ಕೃಪಾ ಆಳ್ವಾ ಉಚ್ಛಾಟನೆ
Friday, October 30, 2026
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕಿ ಕೃಪಾ ಆಳ್ವಾ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷರ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಸ್ಟಿಂಗ್ ಆಪರೇಷನ್ ಹಿಂದೆ ಸ್ವಪಕ್ಷದವರ ಕೈವಾಡವಿದೆ ಎಂದು ಪ್ರಕರಣದ ದೂರುದಾರ, ಸಚಿವ ಯತೀಂದ್ರ ಸಿದ್ದರಾಮಯ್ಯ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈ ಪ್ರಕರಣದ ವಿಚಾರವಾಗಿ ಕೃಪಾ ಆಳ್ವಾ ಅವರ ಹೆಸರನ್ನು ಪ್ರಸ್ತಾಪಿಸಿದ್ದರು.
ಈ ಬೆಳವಣಿಗೆಗಳ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣದ ಕುರಿತು ಮಹತ್ವದ ಚರ್ಚೆ ನಡೆಸಿದ್ದರು. ಇದೀಗ ಕೃಪಾ ಆಳ್ವಾ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಣ ಮೊದಲ ವಿಕೆಟ್ ಪತನವಾದಂತಾಗಿದೆ.