-->
 ಗಾಂಧಿ ಜಯಂತಿ ಪ್ರಯುಕ್ತ ತೆಂಕುಪೇಟೆಯ ದೈವಸ್ಥಾನ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಪ್ರಯುಕ್ತ ತೆಂಕುಪೇಟೆಯ ದೈವಸ್ಥಾನ ಸ್ವಚ್ಛತಾ ಆಂದೋಲನ


ಗಾಂಧಿ ಜಯಂತಿಯ ಪ್ರಯುಕ್ತ ಜೇಸಿಐ ಉಡುಪಿ ಶಿವಳ್ಳಿ ಘಟಕದ ನೇತೃತ್ವದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದೈವಸ್ಥಾನಗಳ ಸ್ವಚ್ಛತಾ ಆಂದೋಲನ ನಡೆಯಿತು.


ತೆಂಕುಪೇಟೆಯ ವುಡ್‌ಲ್ಯಾಂಡ್ಸ್ ಹೋಟೆಲ್ ಸಮೀಪದ ಬೊಬ್ಬರ್ಯ, ಕಾಂತೇರಿ, ಜುಮಾದಿ, ಕಲ್ಕುಡ ಹಾಗೂ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ಅ.2ರಂದು ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆರಂಭದಲ್ಲಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು.


ಜೇಸಿಐ ಉಡುಪಿ ಶಿವಳ್ಳಿ ಘಟಕ, ಜೇಸಿಐ ಕಾಪು, ಬೊಬ್ಬರ್ಯ ಸೇವಾ ಸಮಿತಿ ಉಡುಪಿ, ಲಯನ್ಸ್ ಕ್ಲಬ್ ಬನ್ನಂಜೆ ಟೈಗರ್ ಹಾಗೂ ಅಖಿಲ ಭಾರತ ದೈವರಾಧಕರ ಒಕ್ಕೂಟ (ರಿ.) ಕೇಂದ್ರೀಯ ಸಮಿತಿ ಉಡುಪಿ ಜಿಲ್ಲೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಉಡುಪಿ ಶಿವಳ್ಳಿ ಘಟಕದ ಅಧ್ಯಕ್ಷ, ಬೊಬ್ಬರ್ಯ ಸೇವಾ ಸಮಿತಿಯ ಸಂಸ್ಥಾಪಕ ಹಾಗೂ ಅಖಿಲ ಭಾರತ ದೈವರಾಧಕರ ಒಕ್ಕೂಟದ ಕೇಂದ್ರೀಯ ಸಮಿತಿ ಉಡುಪಿ ಜಿಲ್ಲೆಯ ಸಂಸ್ಥಾಪಕ ಅಧ್ಯಕ್ಷ ವಿನೋದ್ ಶೆಟ್ಟಿ ವಹಿಸಿದ್ದರು.

ಲಯನ್ಸ್ ಕ್ಲಬ್ ಬನ್ನಂಜೆ ಟೈಗರ್ ಅಧ್ಯಕ್ಷೆ ಸುಮಾಲಿನಿ ದಯಾನಂದ, ಕಾರ್ಯದರ್ಶಿ ಅನುಪಮ ಜಯಕುಮಾರ್, ಬೊಬ್ಬರ್ಯ ಸೇವಾ ಸಮಿತಿ ಅಧ್ಯಕ್ಷ ವರದರಾಜ ಕಾಮತ್, ಒಕ್ಕೂಟದ ಉಪಾಧ್ಯಕ್ಷರಾದ ಜಯ್ ಮಡಿವಾಳ, ಸುಧಾಕರ್ ಮಡಿವಾಳ, ವಾಸು ಸೇರಿಗಾರ್, ಉದಯ ಮೆಂಡನ್, ಪ್ರಧಾನ ಕಾರ್ಯದರ್ಶಿ ದಿನೇಶ್ ಪೂಜಾರಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article