-->
 ದ.ಕ ಜಿಲ್ಲೆಯಲ್ಲಿ ಮಳೆಯಬ್ಬರ: ಬಂಟ್ವಾಳದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ದ.ಕ ಜಿಲ್ಲೆಯಲ್ಲಿ ಮಳೆಯಬ್ಬರ: ಬಂಟ್ವಾಳದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಸುರಿದ ಭಾರೀ ಗುಡುಗು-ಮಿಂಚು ಸಹಿತ ಮಳೆಯಿಂದಾಗಿ ಹಲವೆಡೆ ಹಾನಿ ಉಂಟಾಗಿದೆ. ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡದಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದೆ.

ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ನಾಗೇಶ್ ಕುಲಾಲ್ ಎಂಬುವವರ ಮನೆಯ ಮೇಲೆ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮನೆಯ ಹಂಚು, ಗೋಡೆ ಹಾಗೂ ಕಿಟಕಿ ಗಾಜುಗಳು ಪುಡಿಪುಡಿಯಾಗಿದೆ. ಘಟನೆಯ ವೇಳೆ ಮನೆಯಲ್ಲಿದ್ದ ನಾಗೇಶ್ ಕುಲಾಲ್ ಅವರ ಪತ್ನಿ ಕುಶಲ ಅವರು ಅಸ್ವಸ್ಥರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Ads on article

Advertise in articles 1

advertising articles 2

Advertise under the article