-->
ಕರ್ನಾಟಕ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ


ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ರಾಜ್ಯಪಾಲರ ವರ್ಗಾವಣೆ ಹಾಗೂ ಹೊಸ ರಾಜ್ಯಪಾಲರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.
ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಒಡಿಶಾ ರಾಜ್ಯಪಾಲರಾಗಿ ಬ್ರಿಜ್ ಮೋಹನ್ ರಾಮ್, ಉತ್ತರಾಖಂಡ ರಾಜ್ಯಪಾಲರಾಗಿ ಡಾ. ಧಲ್ ಸಿಂಗ್ ಬಿಸೆನ್ ಹಾಗೂ ಸಿಕ್ಕಿಂ ರಾಜ್ಯಪಾಲರಾಗಿ ದುಷ್ಯಂತ್ ಗೌತಮ್ ಅವರನ್ನು ನೇಮಿಸಲಾಗಿದೆ.
ಪ್ರಸ್ತುತ ಸಿಕ್ಕಿಂ ರಾಜ್ಯಪಾಲರಾಗಿರುವ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರಾಗಿ ವರ್ಗಾಯಿಸಲಾಗಿದೆ. ಕೇರಳದ ಪ್ರಸ್ತುತ ರಾಜ್ಯಪಾಲರಾಗಿರುವ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article