ಜಯಾನಂದ ಕೊಡವೂರು ಹೃದಯಾಘಾತದಿಂದ ನಿಧನ l
Saturday, October 10, 2026
ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿ, ಲಯನ್ಸ್ ಕ್ಲಬ್ ಅಂಬಲಪಾಡಿ ಪ್ರೈಡ್ ನ ಮಾಜಿ ಅಧ್ಯಕ್ಷ ಜಯಾನಂದ ಕೊಡವೂರು ನಿನ್ನೆ (ಅ. 9) ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಲಯನ್ಸ್ ಕ್ಲಬ್ ಅಂಬಲಪಾಡಿ ಪ್ರೈಡ್ ನಲ್ಲಿ ಎರಡು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು, ವಲಯ ಅಧ್ಯಕ್ಷರಾಗಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದರು. ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ನಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.