-->
 MRPL ಸ್ಫೋಟ: ಮೃತನ ಕುಟುಂಬ, ಗಾಯಾಳುಗಳಿಗೆ ಪರಿಹಾರಕ್ಕೆ ಆಗ್ರಹಿಸಿ ಕಾರ್ಮಿಕರಿಂದ ಧರಣಿ

MRPL ಸ್ಫೋಟ: ಮೃತನ ಕುಟುಂಬ, ಗಾಯಾಳುಗಳಿಗೆ ಪರಿಹಾರಕ್ಕೆ ಆಗ್ರಹಿಸಿ ಕಾರ್ಮಿಕರಿಂದ ಧರಣಿ


ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿಯ ಎಂಆರ್‌ಪಿಎಲ್ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮನೇಶ್ ಕರ್ಕಡ ಹಾಗೂ ಗಾಯಗೊಂಡ ಕಾರ್ಮಿಕರಿಗೆ ಸೂಕ್ತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಕಾರ್ಮಿಕರು ಕಾರ್ಗೋ ಗೇಟ್ ಮುಂಭಾಗ ಧರಣಿ ನಡೆಸಿದರು.


ಸ್ಫೋಟದಲ್ಲಿ ಮೃತಪಟ್ಟ ಮನೇಶ್ ಕರ್ಕಡ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಗಾಯಗೊಂಡ ಕಾರ್ಮಿಕರಿಗೆ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಮತ್ತು ಪರಿಹಾರ ಕಲ್ಪಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಇಎಸ್‌ಐ ಸೌಲಭ್ಯ ಹೊಂದಿರದ ಕಾರ್ಮಿಕರಿಗೆ ಗರಿಷ್ಠ 5 ಲಕ್ಷದವರೆಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಕುರಿತು 15 ದಿನಗಳೊಳಗೆ ತೀರ್ಮಾನ ಕೈಗೊಳ್ಳುವುದಾಗಿ ಎಂಆರ್‌ಪಿಎಲ್ ಅಧಿಕಾರಿಗಳು ಭರವಸೆ ನೀಡಿದರು. ಆದರೆ ಇದಕ್ಕೆ ಪ್ರತಿಭಟನಕಾರರು ಒಪ್ಪಿಗೆ ಸೂಚಿಸಲಿಲ್ಲ.

ಇಎಸ್‌ಐ ಸೌಲಭ್ಯ ಇಲ್ಲದ ಕಾರ್ಮಿಕರಿಗೆ ಗರಿಷ್ಠ ₹10 ಲಕ್ಷದವರೆಗೆ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಈ ಕುರಿತು ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರು ಸ್ಥಳಕ್ಕೆ ಆಗಮಿಸಿ ಲಿಖಿತ ಭರವಸೆ ನೀಡಬೇಕು ಎಂದು ಕಾರ್ಮಿಕರು ಆಗ್ರಹಿಸಿದರು.

ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಸ್ಫೋಟದಲ್ಲಿ ಮೃತಪಟ್ಟ ಮನೇಶ್ ಕರ್ಕಡ ಅವರ ಮೃತದೇಹವನ್ನು ಕಾರ್ಗೋ ಗೇಟ್ ಬಳಿಗೆ ತಂದು ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರು ಸ್ಥಳಕ್ಕೆ ಆಗಮಿಸಿ ಲಿಖಿತ ಭರವಸೆ ನೀಡಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಕಾರ್ಗೋ ಗೇಟ್ ಮುಂಭಾಗ ಧರಣಿ ಮುಂದುವರಿಸಿದ್ದಾರೆ.

Ads on article

Advertise in articles 1

advertising articles 2

Advertise under the article