-->
 ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಆರೋಪಿಯ ಬಂಧನ

ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಆರೋಪಿಯ ಬಂಧನ


ಸಾರ್ವಜನಿಕ ಸ್ಥಳದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ವೇಣೂರು ನಿವಾಸಿ ಇಸಾಕ್ (61) ಬಂಧಿತ ಆರೋಪಿ. ಅ. 24ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯು ಕೆಲಸ ಮಾಡುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಅಲ್ಲಿಗೆ ಬಂದ ಇಸಾಕ್, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಯುವತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಆರೋಪಿಯನ್ನು ಬಂಧಿಸಲಾಗಿದೆ.



Ads on article

Advertise in articles 1

advertising articles 2

Advertise under the article