-->
ಕರಾವಳಿ ಹೈಕೋರ್ಟ್ ಪೀಠ ರಚನೆಗೆ ಬೆಂಬಲ ಸೂಚಿಸಲು ಪುರುಷೋತ್ತಮ ಬಿಳಿಮಲೆಗೆ ಮನವಿ

ಕರಾವಳಿ ಹೈಕೋರ್ಟ್ ಪೀಠ ರಚನೆಗೆ ಬೆಂಬಲ ಸೂಚಿಸಲು ಪುರುಷೋತ್ತಮ ಬಿಳಿಮಲೆಗೆ ಮನವಿ


ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಕೋರಿ, ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕ ಪ್ರೇಮ್ ಪ್ರಸಾದ್ ಶೆಟ್ಟಿ ಅವರು  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಹಿರಿಯ ಜಾನಪದ ವಿದ್ವಾಂಸರಾದ ಡಾ. ಪುರುಷೋತ್ತಮ ಬಿಳಿಮಲೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟು, ಈ ಹೋರಾಟಕ್ಕೆ ಬೆಂಬಲ ನೀಡುವಂತೆ ಸಮಿತಿಯ ವತಿಯಿಂದ ಮನವಿ ಮಾಡಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಾ. ಪುರುಷೋತ್ತಮ ಬಿಳಿಮಲೆಯವರು, ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ಸೂಚಿಸಿ, ಈ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ  ಪೌರ್ಣಮಿ ಪ್ರೇಮ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article