-->
 ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡ

ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡ


ಮಂಗಳೂರಿನ ಕುಂಪಲದ ಚೇತನ ನಗರದಲ್ಲಿ ಪರವಾನಿಗೆ ಇಲ್ಲದೆ ಕಾರ್ಯಾಚರಿಸುತ್ತಿದ್ದ ಗುಜರಿ ಅಂಗಡಿಯೊಂದರಲ್ಲಿ ಗುರುವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. 

ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸಮಯಪ್ರಜ್ಞೆಯಿಂದ ಬೆಂಕಿ ನಂದಿಸಿದ್ದು, ಅಕ್ಕಪಕ್ಕದ ಮನೆಗಳಿಗೆ ಬೆಂಕಿ ವ್ಯಾಪಿಸುವ ಅಪಾಯ ತಪ್ಪಿದೆ.

ಚೇತನ ನಗರದ ಬಾಡಿಗೆ ಕೋಣೆಯೊಂದರಲ್ಲಿ ಅಬ್ದುಲ್ ತುಫೈಲ್ ಎಂಬವರು ಗುಜರಿ ಅಂಗಡಿ ನಡೆಸುತ್ತಿದ್ದರು ಎನ್ನಲಾಗಿದೆ. ಈ ಅಂಗಡಿಗೆ ಸಂಬಂಧಿಸಿದಂತೆ ಸೋಮೇಶ್ವರ ಪುರಸಭೆಯು ಮಾಲಕರಿಗೆ ಈಗಾಗಲೇ ಮೂರು ಬಾರಿ ನೋಟಿಸ್ ನೀಡಿತ್ತು ಎಂದು ತಿಳಿದುಬಂದಿದೆ.

ಗುರುವಾರ ಸಂಜೆ ಅಂಗಡಿ ಮುಚ್ಚಿದ ಬಳಿಕ ಒಳಗಡೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಜ್ವಾಲೆಗಳು ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷ ರವಿಶಂಕರ ಸೋಮೇಶ್ವರ ಹಾಗೂ ಸದಸ್ಯರಾದ ಹರೀಶ್ ಕುಂಪಲ ಮತ್ತು ಮನೋಜ್ ಕಟ್ಟೆಮನೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Ads on article

Advertise in articles 1

advertising articles 2

Advertise under the article