-->
ಮೋದಿ ಆಡಳಿತದಿಂದ ಸಮರ್ಥ, ಸಮೃದ್ಧ ಭಾರತ ನಿರ್ಮಾಣ: ಕೋಟ ಶ್ರೀನಿವಾಸ ಪೂಜಾರಿ

ಮೋದಿ ಆಡಳಿತದಿಂದ ಸಮರ್ಥ, ಸಮೃದ್ಧ ಭಾರತ ನಿರ್ಮಾಣ: ಕೋಟ ಶ್ರೀನಿವಾಸ ಪೂಜಾರಿ


ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ದೇಶವು ಸಮರ್ಥ, ಸಮೃದ್ಧ, ಶಕ್ತಿಶಾಲಿ ಹಾಗೂ ಸ್ವಾಭಿಮಾನಿ ಭಾರತದತ್ತ ಸಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.


ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಪುರಭವನದಲ್ಲಿ ಆಯೋಜಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಸೇವಾ ಜ್ಯೋತಿ ಯಾತ್ರೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಒಂದು ಕಾಲದಲ್ಲಿ ಭಾರತವನ್ನು ವಿಶ್ವ ಸಮುದಾಯ ನಿರ್ಲಕ್ಷ್ಯದಿಂದ ನೋಡುತ್ತಿತ್ತು. ಆದರೆ ಇಂದು ಜಗತ್ತು ಭಾರತದತ್ತ ಗಮನಹರಿಸುತ್ತಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತವೇ ಪ್ರಮುಖ ಕಾರಣ. ‘ವಿಕಸಿತ ಭಾರತ’ದ ಕಲ್ಪನೆಯೊಂದಿಗೆ ದೇಶವು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದರು.


ಒಂದು ಕಾಲದಲ್ಲಿ ಚಿನ್ನ ಅಡವಿಟ್ಟು ದೇಶದ ಆಡಳಿತ ನಡೆಸಬೇಕಾದ ಪರಿಸ್ಥಿತಿ ಇತ್ತು. ಆದರೆ ಇಂದು ಭಾರತ 68 ದೇಶಗಳಿಗೆ ಸಾಲ ನೀಡುವ ಸಾಮರ್ಥ್ಯ ಹೊಂದಿದೆ. ಕುಟುಂಬ ಹಾಗೂ ಮಕ್ಕಳ ಹಿತಕ್ಕಾಗಿ ರಾಜಕಾರಣ ಮಾಡದೆ, ದೇಶದ ಹಿತಕ್ಕಾಗಿ ರಾಜಕಾರಣ ಮಾಡುತ್ತಿರುವ ಪ್ರಬಲ ನಾಯಕ ನರೇಂದ್ರ ಮೋದಿ ಎಂದು ಅವರು ಹೇಳಿದರು. 

ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಹಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳುತ್ತಿರುವುದು ಘೋರ ಅಪರಾಧ ಎಂದು ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಸುನಿಲ್ ಕುಮಾರ್, ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಪ್ರಮುಖರಾದ ಶಿಲ್ಪಾ ಜಿ. ಸುವರ್ಣ, ದಿನಕರ ಬಾಬು, ಕೆ. ಉದಯಕುಮಾರ್ ಶೆಟ್ಟಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ವರ್ಚುವಲ್ ವ್ಯವಸ್ಥೆಯ ಮೂಲಕ ದೆಹಲಿಯಲ್ಲಿ ನಡೆದ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಾಯಿತು. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸ್ವಾಗತಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು ಒಂದು ಗಂಟೆ ಕಾಲ ಮಾತನಾಡಿ ಸುಶಾಸನದ ಮಹತ್ವವನ್ನು ಒತ್ತಿ ಹೇಳಿದರು.

ಕಾರ್ಯಕ್ರಮದ ಬಳಿಕ ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಮುಖರು ಪುರಭವನದಿಂದ ಜೋಡುಕಟ್ಟೆವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.

Ads on article

Advertise in articles 1

advertising articles 2

Advertise under the article