ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ
Friday, October 30, 2026
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಪ್ರತ್ಯೇಕ ಘಟನೆಗಳಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ.
ಶ್ರೀರಾಂಜನೇಯ ಪರ್ಸಿನ್ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ದ್ವಾರಿಕಾ ಶಿಕಾರ್ (28) ಹಾಗೂ ಓಂ ಶ್ರೀದತ್ತ ಮೀನುಗಾರಿಕಾ ಬೋಟ್‌ನಲ್ಲಿ ತೆರಳಿದ್ದ ಪ್ರಮೋದ್ ಗೌಡ (53) ಸಮುದ್ರಕ್ಕೆ ಬಿದ್ದು ಕಾಣೆಯಾಗಿದ್ದಾರೆ.
ಈ ಇಬ್ಬರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ (0820-2537999), ಪೊಲೀಸ್ ಉಪನಿರೀಕ್ಷಕರು (9480805447) ಅಥವಾ ಉಡುಪಿ ವೃತ್ತ ನಿರೀಕ್ಷಕರು (9480805430) ಅವರನ್ನು ಸಂಪರ್ಕಿಸುವಂತೆ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.