ಉಡುಪಿ ಪುರಭವನದಲ್ಲಿ ಫುಡ್ & ಬಿಸಿನೆಸ್ ಎಕ್ಸ್‌ಪೋ ಉದ್ಘಾಟಿಸಿದ ಹರಿಪ್ರಸಾದ್ ರೈ
Saturday, October 10, 2026
ವಸುದೈವ ಕುಟುಂಬಕಂ ಟ್ರಸ್ಟ್, ಉಡುಪಿ ಹಾಗೂ ಬೆನಕಾ ಇವೆಂಟ್ಸ್, ಕುಂದಾಪುರ ಇವರ ಸಹಯೋಗದಲ್ಲಿ ಉಡುಪಿ ಟೌನ್ ಹಾಲ್‌ನಲ್ಲಿ ಆಯೋಜಿಸಲಾದ ಫುಡ್ & ಬಿಸಿನೆಸ್ ಎಕ್ಸ್‌ಪೋವನ್ನು ಎಚ್‌ಪಿಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಮತ್ತು ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಉದ್ಯಮಿಗಳು, ಸಣ್ಣ ವ್ಯಾಪಾರಸ್ಥರು, ಗೃಹೋದ್ಯಮ ನಡೆಸುವವರು ಹಾಗೂ ಆಹಾರ ಉತ್ಪನ್ನಗಳ ತಯಾರಕರಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಮತ್ತು ಹೊಸ ಗ್ರಾಹಕರನ್ನು ತಲುಪಲು ಇದೊಂದು ಉತ್ತಮ ವೇದಿಕೆಯಾಗಿದೆ. ಗ್ರಾಮೀಣ ಭಾಗದ ಉದ್ಯಮಿಗಳಿಗೆ ಮಾರುಕಟ್ಟೆ ಒದಗಿಸುವುದು, ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವುದು ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚಿನ ಮನ್ನಣೆ ದೊರಕಿಸಿಕೊಡುವ ನಿಟ್ಟಿನಲ್ಲಿ ಆಯೋಜಕರು ಕೈಗೊಂಡಿರುವ ಈ ಪ್ರಯತ್ನ ಶ್ಲಾಘನೀಯ ಎಂದರು.

.jpeg)
.jpeg)