-->
 ಜಂತರ್ ಮಂತರ್ ಪ್ರತಿಭಟನೆ: ಮೂರು ಎಫ್‌ಐಆರ್‌ ದಾಖಲಿಸಿದ ದಿಲ್ಲಿ ಪೊಲೀಸರು

ಜಂತರ್ ಮಂತರ್ ಪ್ರತಿಭಟನೆ: ಮೂರು ಎಫ್‌ಐಆರ್‌ ದಾಖಲಿಸಿದ ದಿಲ್ಲಿ ಪೊಲೀಸರು


ಮತಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ವೇಳೆ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ಬಳಿ ಶುಕ್ರವಾರ ಪ್ರತಿಭಟನೆ ನಡೆಸಲು ಯತ್ನಿಸಿದ ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ನಾಗರಿಕ ಸಂಘಟನೆಗಳ ಹೋರಾಟಗಾರರ ವಿರುದ್ಧ ದಿಲ್ಲಿ ಪೊಲೀಸರು ಮೂರು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಪಾರ್ಲಿಮೆಂಟ್ ಸ್ಟ್ರೀಟ್ ಹಾಗೂ ಕನ್ಹಾಟ್ ಪ್ಲೇಸ್ ಪೊಲೀಸ್ ಠಾಣೆಗಳಲ್ಲಿ ಈ ಪ್ರಕರಣಗಳು ದಾಖಲಾಗಿವೆ. ಪೊಲೀಸ್ ಅಧಿಕಾರಿಗಳ ದೈನಂದಿನ ದಿನಚರಿ ದಾಖಲೆಯ ಆಧಾರದ ಮೇಲೆ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕ ಅಧಿಕಾರಿಯೊಬ್ಬರು ಕಾನೂನುಬದ್ಧವಾಗಿ ಜಾರಿಗೊಳಿಸಿದ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 223ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆದರೆ, ಎಫ್‌ಐಆರ್‌ಗಳಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ಹೆಸರುಗಳನ್ನು ನೇರವಾಗಿ ಶಂಕಿತರು ಅಥವಾ ಆರೋಪಿಗಳಾಗಿ ನಮೂದಿಸಿಲ್ಲ. ಪ್ರತಿಭಟನೆಯ ಸಂಘಟಕರು, ಸಂಘಟನೆಗಳು ಹಾಗೂ ಪ್ರತಿಭಟನೆಗೆ ಕರೆ ನೀಡಿದ ಮತ್ತು ಭಾಗವಹಿಸಿದವರ ಕುರಿತು ಎಫ್‌ಐಆರ್‌ನ ವಿಷಯ ಭಾಗದಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article