-->
 ಮಲ್ಪೆ ಬೀಚ್‌ನಲ್ಲಿ ನ. 10ರಂದು 24ನೇ ವರ್ಷದ ದೀಪಾವಳಿ ಸಂಭ್ರಮ

ಮಲ್ಪೆ ಬೀಚ್‌ನಲ್ಲಿ ನ. 10ರಂದು 24ನೇ ವರ್ಷದ ದೀಪಾವಳಿ ಸಂಭ್ರಮ



ಮಲ್ಪೆ ಬೀಚ್ ಫ್ರೆಂಡ್ಸ್ ವತಿಯಿಂದ 24ನೇ ವರ್ಷದ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 10ರಂದು ಸಂಜೆ 5 ಗಂಟೆಯಿಂದ ಮಲ್ಪೆ ಬೀಚ್‌ನಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮ, ಸಾಧಕರಿಗೆ ಸಮ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಸಹಾಯಧನ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಸಾಧಕರನ್ನು ಸಮ್ಮಾನಿಸಿ ಗೌರವಿಸಲಾಗುವುದು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಉಡುಪಿ ಎಕ್ಸ್‌ಟೀಮ್ ಡ್ಯಾನ್ಸ್ ಅಕಾಡೆಮಿಯವರಿಂದ ನೃತ್ಯ ಪ್ರದರ್ಶನ ಹಾಗೂ ಕುಮಾರ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಬ್ಯಾಂಡ್ ರಿವೋಲ್ಯೂಶನ್ ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಬೀಚ್ ಫ್ರೆಂಡ್ಸ್ ಗೌರವಾಧ್ಯಕ್ಷ ಶಶಿಧರ ಬಿ. ಕುಂದರ್ ಹಾಗೂ ಅಧ್ಯಕ್ಷ ಧನಂಜಯ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article