-->
 ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ನ್ಯಾಯಾಲಯಕ್ಕೆ ಶರಣು

ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ನ್ಯಾಯಾಲಯಕ್ಕೆ ಶರಣು


ಬಂಟ್ವಾಳದ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಆತನನ್ನು ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಾಂಪ್ರಬೈಲು ನಿವಾಸಿ ಸತೀಶ್ ಶೆಣೈ (57) ಅವರು ಫೆ. 4ರಂದು ಸಂಜೆ ಮನೆಗೆ ಬೀಗ ಹಾಕಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ರಾತ್ರಿ ಮನೆಗೆ ಮರಳಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿರುವುದು ಗಮನಕ್ಕೆ ಬಂದಿದೆ. ಬಳಿಕ ಮನೆಯೊಳಗೆ ಪರಿಶೀಲಿಸಿದಾಗ ಕೊಠಡಿಯ ಲಾಕರ್‌ನಲ್ಲಿದ್ದ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದು ಕಳವಾಗಿರುವುದು ತಿಳಿದುಬಂದಿತ್ತು.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಮೊಹಮ್ಮದ್ ಮಿಸ್ಬಾ (21) ನ್ಯಾಯಾಲಯಕ್ಕೆ ಹಾಜರಾಗಿ ಶರಣಾಗಿದ್ದಾನೆ. ಬಳಿಕ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಆತನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.

Ads on article

Advertise in articles 1

advertising articles 2

Advertise under the article