-->
 ಬಾಳೆಕುದ್ರು ಮಠದ ಪುರಾತನ ವಿಗ್ರಹ ಮಾರಾಟ ಪ್ರಕರಣ: ಪೀಠಾಧಿಪತಿ ನಾಪತ್ತೆ

ಬಾಳೆಕುದ್ರು ಮಠದ ಪುರಾತನ ವಿಗ್ರಹ ಮಾರಾಟ ಪ್ರಕರಣ: ಪೀಠಾಧಿಪತಿ ನಾಪತ್ತೆ


ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಂಗಾರಕಟ್ಟೆಯಲ್ಲಿರುವ ಬಾಳೆಕುದ್ರು ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ಅವರು ಮಠಕ್ಕೆ ಬೀಗ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮಠದಲ್ಲಿ ಶತಮಾನಗಳಿಂದ ಪೂಜಿಸಲ್ಪಡುತ್ತಿದ್ದ ನರಸಿಂಹ ದೇವರು, ಗಣಪತಿ, ಮಹಿಷಮರ್ದಿನಿ ಸೇರಿದಂತೆ ಹಲವು ಪುರಾತನ ವಿಗ್ರಹಗಳು ನಾಪತ್ತೆಯಾಗಿದ್ದವು. ಈ ಕುರಿತು ಮಠದ ಶಿಷ್ಯ ಜಗದೀಶ್ ಐತಾಳ್ ಅವರು ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರಿಗೆ ನಾಪತ್ತೆಯಾಗಿದ್ದ ಪ್ರಾಚೀನ ವಿಗ್ರಹಗಳನ್ನು ಬೆಂಗಳೂರಿನ ಕಂಪನಿಯೊಂದಕ್ಕೆ ಮಾರಾಟ ಮಾಡಿರುವುದು ತಿಳಿದುಬಂದಿದೆ. ಈ ಸಂಬಂಧ ಕಂಪನಿಯ ಮಾಲೀಕ ನಾಗೇಂದ್ರ ಪ್ರಸಾದ್ ಸೇರಿದಂತೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ಅವರು ಮಠಕ್ಕೆ ಬೀಗ ಹಾಕಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಸ್ವಾಮೀಜಿಯವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. 

Ads on article

Advertise in articles 1

advertising articles 2

Advertise under the article